Sunday, April 7, 2024

ಕಾರು ಚಾಲಕನ ಅಜಾಗರೂಕತೆ ಚಾಲನೆ : ಮಗು ಸಹಿತ ಮೂವರಿಗೆ ಗಾಯ

ಕಾರು ಚಾಲಕನ ಅಜಾಗರೂಕತೆಯ ಚಾಲನೆಯಿಂದ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಮಗು ಸಹಿತ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಬೊಬ್ಬೆಕೇರಿ ಕೋಡಿ ಮನೆ ನಿವಾಸಿ ಪ್ರಕಾಶ್, ಪತ್ನಿ ಪಾರ್ವತಿ ಹಾಗೂ ಮಗು ಪ್ರತ್ಯೂಷ್ ಗಾಯಗೊಂಡವರು ಎಂದು ತಿಳಿದುಬಂದಿದೆ.

ಪ್ರಕಾಶ್ ಅವರು ಮಂಜೇಶ್ವರದ ಚೇವಾರಿನಿಂದ ವಿಟ್ಲದ ಬೊಬ್ಬೆಕೇರಿ ಮನೆಯ ಕಡೆ ತೆರಳುತ್ತಿದ್ದ ವೇಳೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ಗೆ ತಲುಪಿದಾಗ ಹಿಂಬದಿಯಿಂದ ‌ಬರುತ್ತಿದ್ದ ಬಾಲಕೃಷ್ಣ ಎಂಬವರು ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯ ತನದಿಂದ ಕಾರು ಚಾಲನೆಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯವಾಗಿದ್ದು, ಪುತ್ತೂರು ಖಾಸಗಿ‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಟ್ಲ ಎಸ್.ಐ.ಸಂದೀಪ್ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...