Thursday, April 11, 2024

ಕೆಲಸಕ್ಕೆ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆ

ವಿಟ್ಲ: ಕೆಲಸಕ್ಕೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಕುರಿತು ಆಕೆಯ ಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ ನಾಪತ್ತೆಯಾದವರಾಗಿದ್ದಾರೆ.

ವಿಟ್ಲದ ಸ್ವೀಟ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕವಿತಾರವರು ಅ.29ರಂದು ಕೆಲಸ ಮುಗಿಸಿ ತನ್ನ ತಾಯಿಮನೆಗೆ ತೆರಳುವುದಾಗಿ ಗಂಡನಲ್ಲಿ ತಿಳಿಸಿ ತೆರಳಿದ್ದರು. ಆದ್ರೆ ರಾತ್ರಿಯಾದರೂ ಕವಿತಾರವರು ತಾಯಿ ಮನೆಗೆ ತಲುಪದ ಹಿನ್ನೆಲೆಯಲ್ಲಿ ಅವರ ಸಹೋದರ ಗಿರೀಶ್ ರವರು ನಾಗೇಶ್ ರವರಿಗೆ ಕರೆ ಮಾಡಿ ಸಹೋದರಿ ಬಂದಿಲ್ಲ ಎಂದು ತಿಳಿಸಿದ್ದರು. ಕೂಡಲೇ ನಾಗೇಶ್ ರವರು ಮನೆಗೆ ತೆರಳುವ ದಾರಿಯ ಸಹಿತ ಸಂಬಂಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರು ಕವಿತಾ ಪತ್ತೆಯಾಗದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನು ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಈ ಭಾವಚಿತ್ರದಲ್ಲಿ ಕಾಣುವ ಮಹಿಳೆ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ‌ ಮಾಡಿದ್ದಾರೆ.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...