Friday, April 5, 2024

ಬೈಕ್ – ಬಸ್ಸು ಮಧ್ಯೆ ಅಪಘಾತ – ಬೈಕ್ ಸವಾರನಿಗೆ ಗಾಯ

 

ವಿಟ್ಲ: ಬಸ್ಸು ಹಾಗೂ ಬೈಕ್ ನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ.

ಬೈಕ್ ಸವಾರ ಕೂವೆತ್ತಿಲ ನಿವಾಸಿ ಟ್ಯಾಂಕರ್ ಚಾಲಕ ಜಗ್ಗ ಯಾನೆ ಜಗದೀಶ್ ಗೌಡ(28 ವ.)ರವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡವರಾಗಿದ್ದಾರೆ.

ಬಿ.ಸಿ.ರೋಡಿಂದ ಪುತ್ತೂರಿಗೆ ಹೋಗುತ್ತಿದ್ದ ತೆರಳುತ್ತಿದ್ದ ಬಸ್ಸ್ ಹಾಗೂ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಮಧ್ಯೆ ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಬಸ್ಸಿನ ಮುಂಭಾಗದಲ್ಲಿ ಅಡಿಭಾಗಕ್ಕೆ ನುಸುಳಿ ಸಿಲುಕಿಕೊಂಡಿದೆ. ಜಗದೀಶ್ ರವರು ಒಂದು ವಾರದ ಹಿಂದಷ್ಟೇ ತನ್ನ ಸ್ನೇಹಿತ ಖರೀದಿಸಿದ್ದ ಹೊಸ ಬೈಕಲ್ಲಿ ಕಬಕಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಥಳೀಯರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಜಖಂಗೊಂಡಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...