Wednesday, April 10, 2024

ವಾಹನ ಸಾವರರೇ ಗಮನಿಸಿ.. ಮಂಗಳೂರು ದಸರಾ ಹಿನ್ನಲೆ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು, ಇನ್ನು ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಇಂದು ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ಕೊಟ್ಟಾರ ಚೌಕಿ ಜಂಕ್ಷನ್‌ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸಬೇಕು. ಇನ್ನು ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮೂಲಕ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‌ಬಾಗ್‌ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್‌.ಆರ್‌ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್‌ ಮಾರ್ಗವಾಗಿ ಬಂಟ್ಸ್‌ ಹಾಸ್ಟೆಲ್‌ ಮೂಲಕ ಸಂಚರಿಸುವುದು. ಅಂಬೇಡ್ಕರ್‌ ಸರ್ಕಲ್‌ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್‌ ಹಾಸ್ಟೆಲ್‌ನಿಂದ ಸಂಚರಿಸುವುದು.

ನ್ಯೂ ಚಿತ್ರಾ ಜಂಕ್ಷನ್‌ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ನ್ಯೂ ಚಿತ್ರಾ ಜಂಕ್ಷನ್‌ನಿಂದ ಕಂಡತ್‌ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‌ಬತ್ತೇರಿ ಮೂಲಕ ಉರ್ವ ಮಾರ್ಕೆಟ್‌ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‌ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್‌, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್‌ ಮಾರ್ಗವಾಗಿ ಮುಂದುವರೆದು ಬಂಟ್ಸ್‌ ಹಾಸ್ಟೆಲ್‌ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉರ್ವಾಸ್ಟೋರ್‌ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್‌, ಕಾಪಿಕಾಡು, ಕೆ.ಎಸ್‌.ಆರ್‌.ಟಿ.ಸಿ, ಬಿಜೈ ಮಾರ್ಕೆಟ್‌ ಜಂಕ್ಷನ್‌ ಮೂಲಕ ಸಂಚರಿಸುವುದು.

ಕೆಎಸ್‌ಆರ್‌ಟಿಸಿ ಜಂಕ್ಷನ್‌ ಕಡೆಯಿಂದ ಎಂ.ಜಿ. ರಸ್ತೆಗೆ ಹಾಗೂ ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಯಿಂದ ಕೆ.ಎಸ್‌.ಆರ್‌.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್‌ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್‌ ಜಂಕ್ಷನ್‌ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಯಿಂದ ಎಂ.ಜಿ ರಸ್ತೆಗೆ ಬರುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್‌ ಬಳಿ ‘ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಗೆ ಸಂಚರಿಸುವುದು. ಪಶು ಆಸ್ಪತ್ರೆ ಜಂಕ್ಷನ್‌ (ಕಪುಚಿನ್‌ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್‌ ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ಗಳ ಪೈಕಿ ಪಂಪ್‌ವೆಲ್‌ ಕಡೆಗೆ ಸಂಚರಿಸುವ ಬಸ್‌ಗಳು ಕೆ.ಪಿ.ಟಿ ಜಂಕ್ಷನ್‌ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್‌ಗಳು ಕುಂಟಿಕಾನ ಜಂಕ್ಷನ್‌ ಮೂಲಕ ಸಂಚರಿಸುವುದು. ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್‌ ರಸ್ತೆಯಿಂದ ಬರ್ಕೆ ಜಂಕ್ಷನ್‌ ತನಕ ಮತ್ತು ಬರ್ಕೆ ಜಂಕ್ಷನ್‌ನಿಂದ ದುರ್ಗಾಮಹಲ್‌ ಜಂಕ್ಷನ್‌ವರೆಗೆ ಹಾಗೂ ದುರ್ಗಾಮಹಲ್‌ ಜಂಕ್ಷನ್‌ನಿಂದ ಅಳಕೆ ಬ್ರಿಡ್ಜ್‌ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್‌ ಜಂಕ್ಷನ್‌ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‌ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‌ನಿಂದ ಉರ್ವ ಮಾರ್ಕೆಟ್‌ ಜಂಕ್ಷನ್‌ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ

ಅಕ್ಟೋಬರ್ 6 ರ ಸಂಜೆ 6 ರಿಂದ ಅಕ್ಟೋಬರ್ 7 ರ ಬೆಳಿಗ್ಗೆ 6 ರವರೆಗೆ ಕಾರ್ಸ್ಟ್ರೀಟ್ ಶಾರದ ಮೆರವಣಿಗೆಗೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಬಾಲಾಜಿ ಜಂಕ್ಷನ್‌ನಿಂದ ಕಾರ್ ಸ್ಟ್ರೀಟ್ ವೆಂಕಟ್ರಮಣ ದೇವಸ್ಥಾನಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ಕೆಳಗಿನ ಕಾರ್ ಸ್ಟ್ರೀಟ್ ಮತ್ತು ಅಜೀಜುದ್ದೀನ್ ರಸ್ತೆ ಮೂಲಕ ಸಾಗಬೇಕು.

ಗಣಪತಿ ಹೈಸ್ಕೂಲ್ ಜಂಕ್ಷನ್‌ನಿಂದ ಕಾರ್ಸ್ಟ್ರೀಟ್ ಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಈ ವಾಹನಗಳು ತಾರಾ ಕ್ಲಿನಿಕ್ ಎದುರಿನ ರಸ್ತೆಯಲ್ಲಿ ಶರವು ದೇವಸ್ಥಾನದ ಮೂಲಕ ಕೆ.ಎಸ್.ರಾವ್ ರಸ್ತೆಗೆ ತೆರಳಬೇಕು. ಸೆಂಟ್ರಲ್ ಮಾರ್ಕೆಟ್ ನಿಂದ ಕಾರ್ ಸ್ಟ್ರೀಟ್ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ವಾಹನಗಳು ಸೆಂಟ್ರಲ್ ಮಾರ್ಕೆಟ್ ರಸ್ತೆಯಲ್ಲಿ ಸಂಚರಿಸಬೇಕು ಮತ್ತು ಕ್ಲಾಕ್ ಟವರ್ ಮೂಲಕ ಚಲಿಸಬೇಕು ಮತ್ತು ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...