Saturday, April 13, 2024

ಬಂಟ್ವಾಳ ಐವರು ಸೇರಿದಂತೆ ಒಂದು ಸಂಘ ಸಂಸ್ಥೆಗೆ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಪ್ರಶಸ್ತಿಯ ಹಿಂದೆ ಹೋಗದೆ ಕರ್ತವ್ಯವೇ ದೇವರು ಎಂಬ ನೆಲೆಯಲ್ಲಿ ಸಮಾಜ ಸೇವೆ ಹಾಗೂ ಕಾಯಕದಲ್ಲಿ ತೊಡಗಿದ್ದ ಬಂಟ್ವಾಳ ತಾಲೂಕಿನ ಐವರು ಹಾಗೂ ಒಂದು ಸಂಘಟನೆಯ ನ್ನು ಗುರುತಿಸಿ ಈ ಬಾರಿ ಜಿಲ್ಲಾ‌ ಪ್ರಶಸ್ತಿಯ ಗರಿ ನೀಡಲಾಗಿದೆ.

ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದ ಸೇಸಪ್ಪ ಕೋಟ್ಯಾನ್, ಯಕ್ಷರಂಗದ ದಿಗ್ಗಜ ಹಾಸ್ಯ ಕಲಾವಿದ ಜಯರಾಮ ಆಚಾರ್ಯ, ವೈದ್ಯ ವೃತ್ತಿಯಲ್ಲಿ ಸೇವೆ ಸಲ್ಲಿಸಿದ ಬಾಸ್ಕರ್ ರಾವ್, ಜಾನಪದ ಕ್ಷೇತ್ರ ವೆಂಕಪ್ಪ ನಲಿಕೆ, ಹಾಗೂ ಬಂಟ್ವಾಳ ಹಿರಿಯ ಪತ್ರಕರ್ತ ವೆಂಕಟೇಶ್ ಬಂಟ್ವಾಳ, ಶಾರದಾ ಫ್ರಂಡ್ಸ್ ಸರ್ಕಲ್ ಸಜಿಪ ಮುನ್ನೂರು ಇವರಿಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಐವರು ಹಾಗೂ ಸಂಘಟನೆ ಪ್ರಶಸ್ತಿ ಗೆ ಎಂದೂ ಅರ್ಜಿ ಹಾಕಿಲ್ಲ…ಈ ಬಾರಿ ಇವರನ್ನು ಗುರುತಿಸಿ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ಗೆ ಪಾತ್ರವಾಗಿದೆ.

 

ಹಿಂದೆಂದೂ ಆಯ್ಕೆ ಮಾಡದ ರೀತಿಯಲ್ಲಿ ಈ ಬಾರಿಯ‌ ಆಯ್ಕೆ ಬಂಟ್ವಾಳದ ಜನತೆಗೆ ಹರ್ಷ ತಂದಿದೆ. ಅರ್ಹವಾಗಿ ಪ್ರಶಸ್ತಿ ಲಭಿಸಿದೆ ಎಂಬುದು ಉಲ್ಲೇಖನೀಯ……

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...