Sunday, April 7, 2024

ನಮ್ಮ ಬಂಟ್ವಾಳ ಸಮೂಹ ಸಂಸ್ಥೆಗೆ ರಜತ ಸಂಭ್ರಮ : ನಮ್ಮ ನ್ಯೂಸ್ ಚಾನೆಲ್ ಶುಭಾರಂಭ

ಬಂಟ್ವಾಳ: ಕಳೆದ 25 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ರಜತ ಸಂಭ್ರಮದ ಸವಿನೆನಪಿಗಾಗಿ ನೂತನ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡ ನಮ್ಮ ನ್ಯೂಸ್ ಚಾನೆಲ್ ಅ.14ರಂದು ಬಿ.ಸಿ.ರೋಡು ಕಳ್ಳಿಮಾರ್ ಬಳಿ ನವೀಕೃತ ಕಟ್ಟಡದಲ್ಲಿ ಹೊಸ ತಾಂತ್ರಿಕ ವಿನ್ಯಾಸದ ಸ್ಟುಡಿಯೋದೊಂದಿಗೆ ಶುಭಾರಂಭಗೊಂಡಿತು.

ಸಜೀಪ ಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ದೀಪ ಬೆಳಗಿಸುವ ಮೂಲಕ ನಮ್ಮ ನ್ಯೂಸ್ ಚಾನೆಲ್ ಗೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶುಭಹಾರೈಸಿ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಧನೆ ಮಾಡಿರುವ ನಮ್ಮ ಬಂಟ್ವಾಳ ಸಂಸ್ಥೆಗೆ ಇದೀಗ ಹೊಸ ನಮ್ಮ ನ್ಯೂಸ್ ಚಾನೆಲ್ ಆರಂಭಗೊಳ್ಳುತ್ತಿದ್ದು, ಇದು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಎರಡು ಜಿಲ್ಲೆಗಳಿಗೆ ನಿರಂತರವಾಗಿ ದಿನದ 24 ಗಂಟೆಗಳ ಕಾಲ ಸುದ್ದಿಯನ್ನು ನೀಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕರಾಮ್ ಪೂಜಾರಿ, ನಿವೃತ್ತ ಶಿಕ್ಷಕ ರಾಮಚಂದ್ರ ರಾವ್ ಮೊದಲಾದವರು ಹಾರೈಸಿದರು.

ಉದ್ಘಾಟನೆಯ ವೇಳೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ನ್ಯಾಯವಾದಿ ಪ್ರಸಾದ್‌ಕುಮಾರ್ ರೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿಗಳನ್ನು ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಪುಂಜಾಲಕಟ್ಟೆ ದಂಪತಿ ಗೌರವಿಸಿದರು. ಪತ್ರಕರ್ತ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...