ಬೆಂಜನಪದವು: ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ಇದರ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಪೊಳಲಿ ಶ್ರೀ ರಾಜರಾಜೇಶ್ವರಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿದ್ದು, ಅ.07 ರಂದು ಶೈಕ್ಷಣಿಕ ಕಾರ್ಯಾಗಾರ ನಡೆಯಿತು.

ಸಹ್ಯಾದ್ರಿ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಉದ್ಯಮಿ ಜಗನ್ನಾಥ ಚೌಟ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸಾಮರಸ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಯೂನಿಯನ್ ಬ್ಯಾಂಕ್ ಪೊಳಲಿ ಶಾಖೆಯ ಪ್ರಬಂಧಕ ಪ್ರಸಾದ್ ಕುಮಾರ್ ಅವರು ಹಣಕಾಸು ವಲಯದಲ್ಲಿ ಡಿಜಿಟಲೀಕರಣ ಮತ್ತು ಜನರ ಸ್ಪಂದನೆ ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.
ಊರಿನ ಪ್ರಮುಖ ಉದ್ಯಮಿಗಳು ಆದಂತಹ ಸಂಪತ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾಲೇಜು ಪ್ರಾಂಶುಪಾಲರು ಎನ್.ಎಸ್.ಎಸ್ ನಿರ್ದೇಶಕರು ಕವಿತಾ, ಪೊಳಲಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ಭಟ್, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಬಾಲಕೃಷ್ಣ ಎನ್ ವಿ, ಉಪನ್ಯಾಸಕರಾದ ನೂರ್ ಮಹಮ್ಮದ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಸ್ವಯಂ ಸೇವಕರು ಅತಿಥಿಗಳನ್ನು ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.