Wednesday, April 10, 2024

ಐದನೇ ವರ್ಷದ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುಂಜಾಲಕಟ್ಟೆ: ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್, ಪುಂಜಾಲಕಟ್ಟೆ ಘಟಕ ಸಮಿತಿಯ ವತಿಯಿಂದ ನ.20ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿರುವ ಐದನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ  ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನದಲ್ಲಿ ಜರಗಿತು.

ಚಲನಚಿತ್ರ, ರಂಗಭೂಮಿ ರಂಗ ಕಲಾವಿದ ಸುಂದರ ರೈ ಮಂದಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಯಕ್ಷಗಾನ ಸರ್ವಾಂಗೀಣ ಕಲೆಯಾಗಿದ್ದು,ಮಾನಸಿಕ, ದೈಹಿಕವಾಗಿ ಶಕ್ತಿ ನೀಡುವುದರೊಂದಿಗೆ  ಜ್ಞಾನವನ್ನು ಉದ್ಧೀಪನಗೊಳಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದರು.

ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು  ಮಾತನಾಡಿ, ಅಶಕ್ತ ಕಲಾವಿದರಿಗೆ ನೆರವು ನೀಡುವ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್  ಕಾರ್ಯ ಅಭಿನಂದನೀಯ ಎಂದು ಹೇಳಿದರು.

ಸಮಿತಿ ಗೌರವಾಧ್ಯಕ್ಷ ಜಯಂತ್ ಶೆಟ್ಟಿ ಅವರು ಮಾತನಾಡಿ,  ಫೌಂಡೇಶನ್ ವತಿಯಿಂದ ನಡೆಯುವ ಯಕ್ಷ ತರಬೇತಿ ತರಗತಿಯಿಂದ ಪರಿಸರದ ಮಕ್ಕಳು ಯಕ್ಷಗಾನದ ಬಗ್ಗೆ ಒಲವನ್ನು ಬೆಳೆಸಲು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಿಂದ ವಾರ್ಷಿಕೋತ್ಸವ ದಿನ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ,    ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುಂಜಾಲಕಟ್ಟೆ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಪ್ರಮುಖರಾದ ವಿನೋದ್ ಶೆಟ್ಟಿ ನಂದಾಜೆ, ದಿವಾಕರದಾಸ್ ಕಾವಳಕಟ್ಟೆ, ಕಿಶೋರ್ ಶೆಟ್ಟಿ ಮೂಡಾಯೂರು, ಅಜಿತ್ ಶೆಟ್ಟಿ ಕಾರಿಂಜ, ಅಶೋಕ್ ಮಡಂತ್ಯಾರು, ಯಕ್ಷ ಗುರು ದೇವಿಪ್ರಸಾದ ಆಚಾರ್ಯ, ಘಟಕದ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳಕ್ಕಿನಕೋಡಿ,  ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಪ್ರ.ಕಾರ್ಯದರ್ಶಿ ನವೀನ ಶೆಟ್ಟಿ ಸೇವಾ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಡಿ. ಗೌಡ, ಗೌರವಾಧ್ಯಕ್ಷೆ ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ. ಗೌರವ ಸಲಹೆಗಾರ‍್ತಿ ತುಳಸಿ ಹಾರಬೆ,                        ಪ್ರ.ಕಾರ್ಯದರ್ಶಿ ಸೌಮ್ಯಾ ಮಹಾಬಲ ಶೆಟ್ಟಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಘಟಕದ ಉಪಾಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಶೆಟ್ಟಿ ಮಜಲೋಡಿ ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...