Friday, April 5, 2024

ಪಡಿತರ ಅಕ್ಕಿಗಾಗಿ ಹೊಡೆದಾಟ : ಆಸ್ಪತ್ರೆಗೆ ದಾಖಲು

ಕೋಟ: ಕೋಟದ ವಡ್ಡರ್ಸೆ ಎಂ.ಜಿ. ಕಾಲನಿಯಲ್ಲಿ ಕುಟುಂಬದ ಪಾಲಿನ ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸಂಭವಿಸಿದೆ. ಜ್ಯೋತಿ (32) ಗಾಯಗೊಂಡ ಗೃಹಿಣಿಯಾಗಿದ್ದಾರೆ.

ಮನೆಯಲ್ಲಿ ತಂಗಿ ಆಶಾರವರು ಸರಕಾರದಿಂದ ಸಿಗುವ ಉಚಿತ ಪಡಿತರ ಅಕ್ಕಿಯಲ್ಲಿ ತನ್ನ ಪಾಲಿನ ಅಕ್ಕಿಯನ್ನು ನೀಡುವಂತೆ ಕೇಳಿದಾಗ ಆಶಾ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮಾತಿಗೆ ಮಾತು ಬೆಳೆದು ಜ್ಯೋತಿಯವರಿಗೆ ಮರದ ದೊಣ್ಣೆಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ಇನ್ನು ತೀವ್ರವಾಗಿ ಗಾಯಗೊಂಡ ಅವರನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಅಲ್ಲಿಂದ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...