Saturday, April 6, 2024

ಮಂಗಳೂರಿನಲ್ಲಿ ಮತ್ತೆ SDPI, ನಿಷೇಧಿತ PFI ಮುಖಂಡರ ಮನೆ ಮೇಲೆ ದಾಳಿ : ಐವರು ಮುಖಂಡರು ವಶಕ್ಕೆ

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ.

ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ನಡೆದಿದ್ದು, ಮನೆಯನ್ನು ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದು, ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ.

ಇನ್ನು ಮಂಗಳೂರು SDPI ಜಿಲ್ಕಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲು ದಾಳಿ ನಡೆಸಲಾಗಿದ್ದು, ಈ ವೇಳೆ ಮನೆಯಲ್ಲಿಅಬೂಬಕರ್ ಕುಳಾಯಿ ಇರಲಿಲ್ಲ ಎಂದುತಿಳಿದುಬಂದಿದೆ.

ಆದ್ರೆ ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರನ್ನು ಎನ್​ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಸಾಕಷ್ಟು ಮಾಹಿತಿಯನ್ನು ಹೊರಹಾಕಿದ್ದಾರೆ. ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಪಿಎಫ್​ಐಗೆ ಟರ್ಕಿ ದೇಶದ ಜತೆ ಸಂಪರ್ಕ ಹೊಂದಿದ್ದ ಬಗ್ಗೆ ತಿಳಿದುಬಂದಿದ್ದು, ಟರ್ಕಿ, ಕತಾರ್​ ದೇಶಗಳಿಂದ ಹಣದ ಹೊಳೆಯೇ ಹರಿದುಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟರ್ಕಿ, ಕತಾರ್​ ದೇಶಗಳಿಂದ ಕೇರಳ ಮೂಲಕ ಪಿಎಫ್​ಐಗೆ ಹವಲಾ ಹಣ ಸಂದಾಯವಾಗುತ್ತಿತ್ತು. ನಂತರ ದೇಶದ ವಿವಿಧ ಕಡೆಗಳಲ್ಲಿರುವ ಪಿಎಫ್​ಐ ಖಾತೆಗಳಿಗೆ ವರ್ಗಾವಣೆಯಾಗುತ್ತಿತ್ತು ಎನ್ನಲಾಗುತ್ತಿದೆ. ಹೀಗೆ ಹರಿದುಬಂದ ಹಣವನ್ನು ದೇಶ ವಿರೋಧಿ ಕೃತ್ಯಕ್ಕೆ, ಸರ್ಕಾರದ ವಿರುದ್ಧದ ಪ್ರತಿಭಟನೆ, ಅಪರಾಧಿ ಕೃತ್ಯಗಳಲ್ಲಿ ಬಂಧಿತ PFI ಸದಸ್ಯರ ಕುಟುಂಬಗಳಿಗೆ ನೆರವು ಮತ್ತು ತರಬೇತಿ ಶಿಬಿರಗಳಿಗೆ ಬಳಕೆ ಮಾಡಲಾಗುತ್ತಿತ್ತು ಎಂಬೂದು ತನಿಖೆ ವೇಳೆ ತಿಳಿದುಬಂದಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...