Saturday, April 6, 2024

ಪೊಲೀಸರ ‌ಉತ್ತಮ ಕೆಲಸದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ-ಡಿ.ವೈ.ಎಸ್. ಪಿ.

ಪೊಲೀಸರ ‌ಉತ್ತಮ ಕೆಲಸದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಡಿ.ವೈ.ಎಸ್. ಪಿ.ಪ್ರತಾಪ್ ಸಿಂಗದ ಥೋರಾಟ್ ಅವರು ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಗ್ರಾಮಾಂತರ ಪೋಲಿಸ್ ಸಿಬ್ಬಂದಿ ಗಳ ಬೀಳ್ಕೋಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ‌ವರ್ಗಾವಣೆ ಸಹಜ, ಆದರೆ ಉತ್ತಮ ಕಾರ್ಯದ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಿದಾಗ ವರ್ಗಾವಣೆ,ನಿವೃತ್ತಿಯ ಬಳಿಕವೂ ಜನ ನಮ್ಮನ್ನು ಗುರುತಿಸುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಮಾತನಾಡಿ, ಪೋಲೀಸ್ ಕುಟುಂಬದ ಸಹಕಾರ ಹಾಗೂ ಸಾರ್ವಜನಿಕರ ಸಹಕಾರ ಮತ್ತು ಪೋಲಿಸರು ಸಮಾಜದಲ್ಲಿ ವಿಶ್ವಾಸ ಬಾಂಧವ್ಯ ಹೊಂದಿದರೆ ಮಾತ್ರ ಕಾನೂನು ಸುವ್ಯವಸ್ಥೆ ಪಾಲನೆ ಸುಲಭ ಸಾಧ್ಯ ವಾಗುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ನಗರ ಠಾಣಾ ಎಸ್. ಐ.ಅವಿನಾಶ್, ಟ್ರಾಫಿಕ್ ಎಸ್.ಐ.ಮೂರ್ತಿ, ವಿಟ್ಲ ಎಸ್.ಐ.ಸಂದೀಪ್, ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಕಲೈಮಾರ್, ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್.ಐ.ಸಂಜೀವ, ಗ್ರಾಮಾಂತರ ಮಹಿಳಾ ವಿಭಾಗದ ಎಸ್.ಐ.ಭಾರತಿ, ವಿಟ್ಲ ಎಸ್. ಐ.ರುಕ್ಮ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಿಂದ ವರ್ಗಾವಣೆ ಗೊಂಡ ಕೃಷ್ಣಪ್ಪ, ವಾಸುನಾಯ್ಕ, ಕೇಶವ ನಾಯ್ಕ, ಜನಾರ್ದನ, ರಾಧಕೃಷ್ಣ, ಲೋಕೇಶ್, ಮನೋಜ್ ಕುಮಾರ್, ಸತೀಶ್, ಬಸವರಾಜ್, ಶಿವಕುಮಾರ್, ಶಿವರಾಜ್, ಚೆರಿಯಾನ್, ನಜೀರ್,ಪುನೀತ್ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದ ಸಂಯೋಜಕ ಗ್ರಾಮಾಂತರ ಪೋಲಿಸ್ ಠಾಣಾ ಎಸ್.ಐ.ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ವೇಳೆ ರಾಷ್ಟ್ರ ಪ್ರಶಸ್ತಿ ಪಧಕ ವಿಜೇತರಾದ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಪ್ರೋ.ಎಸ್.ಐ.ಗುಣಪಾಲ್ ಸ್ವಾಗತಿಸಿ, ಎಸ್.ಐ.ಭಾರತಿ ವಂದಿಸಿದರು. ಪೋಲೀಸ್ ಸಿಬ್ಬಂದಿಗಳಾದ ನಾಗರಾಜ್ ಹಾಗೂ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...