Sunday, April 7, 2024

ಬಿಜೆಪಿಯವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲ: ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ

ಬಂಟ್ವಾಳ: ಗ್ರಾಮ ಪಂಚಾಯತ್ ಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸಿ ವಿಕೇಂದ್ರಿಕರಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರದ ಧೋರಣೆ ಯನ್ನು ಖಂಡಿಸಿ ಅ.18 ರಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮುಂದಾಳತ್ವದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ , ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ವತಿಯಿಂದ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು, ಬಿಜೆಪಿಯವರಿಗೆ ಪಂಚಾಯತ್ ರಾಜ್ ವ್ಯವಸ್ಥೆ ಯ ಮೇಲೆ ವಿಶ್ವಾಸ ಇಲ್ಲ. ಅವಧಿ ಮುಗಿದು ಹಲವು ಸಮಯವಾದರೂ ತಾ.ಪಂ.ಜಿ.ಪಂ.ಚುನಾವಣೆ ನಡೆಸಲು ಮುಂದಾಗಿಲ್ಲ, 40% ಕಮೀಷನ್ ಪಡೆದು ಅರ್ಹತೆ ಇಲ್ಲದವರಿಗೆ ಕಾಮಗಾರಿ ನೀಡಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಅಲ್ಪಸಂಖ್ಯಾತ, ದಲಿತ ಸಮುದಾಯದ 70 ಪರ್ಸೆಂಟ್ ಅನುದಾನಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಪಂಚಾಯತ್ ವಿಕೇಂದ್ರೀಕರಣ ದ ಮೂಲಕ ನೇರ ಪಂಚಾಯತ್ ಗೆ ಹಣ ಬರುವಂತೆ ಮಾಡಿದ್ದು, ಕಾಂಗ್ರೇಸ್ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಪರಿಣಾಮಕಾರಿಯಾಗಿ ಸರ್ವರಿಗೂ ಅಧಿಕಾರ ನೀಡುವ ಕೆಲಸ ಕಾಂಗ್ರೇಸ್ ಮಾಡಿದೆ. ರಾಜೀವ್ ಗಾಂಧಿಯವರ ಕನಸಿನ ಕೂಸು ವಿಕೇಂದ್ರೀಕರಣವಾಗಿದ್ದು, ಈ ಕಾರ್ಯವನ್ನು ಕಾಂಗ್ರೇಸ್ ಮಾಡಿದ್ದರ ಹಿನ್ನೆಲೆಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕಾರಣವಾಯಿತು ಎಂದು ಹೇಳಿದರು.

ಅಧಿಕಾರ ವಿಕೇಂದ್ರೀಕರಣದ ಮೂಲಕ ಎಲ್ಲಾ ವರ್ಗದ ಜನರಿಗೆ ಅಧಿಕಾರ ಸಿಗಬೇಕು ಎಂಬ ಕನಸು ಇದ್ದರೆ ಅದು ಕಾಂಗ್ರೇಸ್ ಕೊಡುಗೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಮಾದರಿಯಾಗಿದೆ ಈ ರೀತಿಯಲ್ಲಿ ಸರ್ವರಿಗೂ ಸಮಾನ ರೀತಿಯ ಹತ್ತು ಹಲವು ಜನಪರ ಯೋಜನೆಗಳನ್ನು ಕಾಂಗ್ರೇಸ್ ಅಧಿಕಾರದ ಅವಧಿಯಲ್ಲಿ ಜಾರಿ ಮಾಡಿದೆ. 1912 ಇಸವಿ ಯಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಬ್ಯಾಂಕ್ ಗೆ ನೇರ ಹಣ ವರ್ಗಾವಣೆ ಮಾಡಿದ ಯೋಜನೆಯನ್ನು, ಬಿಜೆಪಿಯವರು ನಾವು ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆ ಮಾಡಲು ನಾನು ಸದಾ ಸಿದ್ದ ಎಂದು ಸವಾಲು ಹಾಕಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ವ್ಯವಸ್ಥೆ ಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಗ್ರಾಮ ಪಂಚಾಯತ್ ಗೆ, ಪಂಚಾಯತ್ ಸದಸ್ಯರಿಗೆ ಹಾಗೂ ಸದಸ್ಯರಿಗೆ ವಿಶೇಷ ವಾದ ಅಧಿಕಾರವನ್ನು ಸ್ವಾತಂತ್ರ್ಯ ಬಳಿಕ ಅಧಿಕಾರ ನೀಡಲಾಗಿತ್ತು.ಆದರೆ ಈಗ ಬಂದಿರುವ ಬಿಜೆಪಿ ಸರಕಾರ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ವನ್ನು ದುರ್ಮಲಗೊಳಿಸಿ, ಅಧಿಕಾರ ವನ್ನು ಮೊಟಕುಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಗೌರವದ ಸ್ವಾಭಿಮಾನದ ಹೋರಾಟ ವೇ ಹೊರತು ಪಕ್ಷದ ಅಸ್ತಿತ್ವಕ್ಕೆಗಾಗಿ ಹೋರಾಟದ ಅಗತ್ಯ ಪಕ್ಷಕ್ಕಿಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಪದ್ಮನಾಭ ರೈ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಪಿಯೂಸ್ ಲ್ ರೋಡ್ರಿಗಸ್, ಸಂಪತ್ ಕುಮಾರ್ ಶೆಟ್ಟಿ, ಸುದರ್ಶನ್ ಜೈನ್, ಮಾಯಿಲಪ್ಪ ಸಾಲ್ಯಾನ್, ಐಡಾಸುರೇಶ್, ಜಯಂತಿ ಪೂಜಾರಿ, ಜೆಸಿಂತಾ ಡಿ.ಸೋಜ, ಕಾಂಚಲಾಕ್ಷಿ , ನವಾಜ್ ಬಡಕಬೈಲು, ಶೋಬಿತ್ ಪೂಂಜಾ, ವೆಂಕಪ್ಪ ಪೂಜಾರಿ, ನಸೀಮಾ ಬೇಗಂ, ಸದಾಶಿವ ಬಂಗೇರ, ಜಗದೀಶ್ ಕೊಯಿಲ, ಸಂದೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...