Friday, April 5, 2024

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ರಾಯಿ ದ್ಯೆಲಾ ಶಾಲೆಯ ಪೂರ್ವಾಭಾವಿ ಸಭೆ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ರಾಯಿ ದ್ಯೆಲಾವನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಪೂರ್ವಾಭಾವಿ ಸಭೆ ರಾಯಿ ಶಾಲೆಯಲ್ಲಿ ನಡೆಯಿತು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿ ಗಳ ಸಂಖ್ಯೆ ಕೊರತೆಯಿಂದಾಗಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಯಲ್ಲಿದ್ದು, ಇದೀಗ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಶಾಲೆಯ ಉನ್ನತೀಕರಿಸಿ , ಉಳಿಸುವ ಜವಾಬ್ದಾರಿಯನ್ನು ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ರಾಯಿ ವಹಿಸಿಕೊಂಡಿದೆ. ಈ ನಿಟ್ಟಿನಲ್ಲಿ ಪ್ರಥಮ ಪೂರ್ವಬಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಊರಿನ ಹಿರಿಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾ ಶಿಕ್ಷಕಿ, ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಟ್ರಸ್ಟಿ ಶ್ರೀಮಾನ್ ಪದ್ಮನಾಭ, ಹಾಗೂ ಸಿ.ಎ ಬ್ಯಾಂಕ್ ಸಿದ್ಧಕಟ್ಟೆ ಇದರ ಅಧ್ಯಕ್ಷ ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...