Tuesday, April 9, 2024

ರಿಕ್ಷಾ ಚಾಲಕರ ಮಾಲಕರ ಭಾರತೀಯ ಮಜ್ದೂರ್ ಸಂಘ, ಬಿ.ಎಮ್.ಎಸ್ ವತಿಯಿಂದ ನಾಲ್ಕನೇ ವರ್ಷದ ಪಾದಯಾತ್ರೆ

ರಿಕ್ಷಾ ಚಾಲಕರ ಮಾಲಕರ ಭಾರತೀಯ ಮಜ್ದೂರ್ ಸಂಘ, ಬಿ.ಎಮ್.ಎಸ್ ವತಿಯಿಂದ ನಾಲ್ಕನೇ ವರ್ಷದ ಪಾದಯಾತ್ರೆಗೆ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.

ಮೋಟಾರ್ ಮತ್ತು ಮಜ್ದೂರ್ ಸಂಘದ ಉಪಾಧ್ಯಕ್ಷ ನಾರಾಯಣ ಪೂಜಾರಿ ಅವರ ನೇತೃತ್ವದಲ್ಲಿ ಪಾದಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ‌ಬಿಸಿರೋಡಿನಿಂದ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿ ದೇವಸ್ಥಾನಕ್ಕೆ ಸುಮಾರು 43 ಜನ ರಿಕ್ಷಾ ಚಾಲಕರು ಪಾದಾಯಾತ್ರೆ ಕೈಗೊಂಡಿದ್ದಾರೆ.

 

ಕಳೆದ ನಾಲ್ಕು ವರ್ಷಗಳಿಂದ ರಿಕ್ಷಾ ಚಾಲಕರು ಪಾದಾಯಾತ್ರೆ ಮಾಡುತ್ತಿದ್ದು, ಇಂದು ಸಂಜೆ 5 ‌.30 ರ ವೇಳೆ ಬಿಸಿರೋಡಿನ ರಕ್ತೇಶ್ಬರಿ ದೇವಲದ ಮುಂಭಾಗದಿಂದ ಹೊರಟು ಪೊಳಲಿ ದೇವಸ್ಥಾನದಲ್ಲಿ ರಾತ್ರಿ ಉಪಹಾರ ಮುಗಿಸಿ ಬಳಿಕ ಬರಿಗಾಲಿನಲ್ಲಿ ಪಾದಾಯಾತ್ರೆಯ ಮೂಲಕ ಕಟೀಲು ಕ್ಷೇತ್ರ ತಲುಪಲಿದ್ದಾರೆ.

ಬಿಸಿರೋಡಿನಿಂದ ಭಾರತೀಯ ಮಜ್ದೂರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಮಣಿಹಳ್ಳ ಅವರ ನೇತೃತ್ವದಲ್ಲಿ ಪಾದಾಯಾತ್ರಿಗಳನ್ನು ಬೀಳ್ಕೊಡಲಾಯಿತು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...