Saturday, April 6, 2024

ಸಂಘಟನೆಯ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆಯಲು ಸುಲಭ ಸಾಧ್ಯ-ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ರಿಕ್ಷಾ ಚಾಲಕರಿಗೆ ಸರ್ಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯಗಳನ್ನು ನೇರವಾಗಿ ಸಿಗುವಂತೆ ಮಾಡಲು ಮಂಡಳಿ ರಚನೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಮೂರು ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಯಿಲ ಅಣ್ಣಳಿಕೆ ರಿಕ್ಷಾ ನಿಲ್ದಾಣ ವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ ಅನೇಕ ಯೋಜನೆ ಗಳು ಜಾರಿಯಲ್ಲಿದ್ದು, ಸಂಘಟನೆಯ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆಯಲು ಸುಲಭ ಸಾಧ್ಯ. ವೃತ್ತಿ ಯಲ್ಲಿ ಯಾವುದೇ ಕೀಳರಿಮೆ ಬೇಡ. ಪ್ರಾಮಾಣಿಕತೆಯ ದುಡಿಮೆಯ ಜೊತೆ ಸಂಘಟಿತರಾಗಿ, ನಿಮ್ಮ ಜೊತೆ ನಾವು ಸದಾ ಇದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ದೇವಪ್ಪ ಪೂಜಾರಿ, ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರಾಮನಾಥ್ ರಾಯಿ,ಪ್ರಮುಖರಾದ ದುರ್ಗಾದಾಸ್ ಶೆಟ್ಟಿ, ವಸಂತ ಅನ್ನಲಿಕೆ, ರತ್ನ ಆನಂದ, ಲಕ್ಷ್ಮೀಧರ ಶೆಟ್ಟಿ ಅರಳ, ರಶ್ಮಿತ್ ಶೆಟ್ಟಿ, ಸಂತೋಷ್ ರಾಯಿ ಬೆಟ್ಟು, ಉಮೇಶ್ ಅರಳ, ಸಂತೋಷ್ ಗೌಡ, ಗುಣವತಿ ವಿನೋದ್ ಶೆಟ್ಟಿ ಮಡಂದೂರ್ ದೂರು, ಚೇತನ್ ಕೊಯ್ಲಾ, ಪ್ರಸನ್ನ ಶೆಟ್ಟಿ ಅರಳ, ರಿಕ್ಷಾ ಮಾಲಕರು ರಾಮಚಂದ್ರ ಅಣ್ಣಳಿಕೆ, ಯಶೋಧರ ಪಂಜಿಕಲ್ಲು, ವಿಶ್ವನಾಥ ಶೆಟ್ಟಿ ಅರಳ ಮತ್ತು ರಿಕ್ಷಾ ಮಾಲಕರು ಮತ್ತು ಚಾಲಕರು ಉಪಸ್ಥಿತರಿದ್ದರು

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...