Wednesday, April 10, 2024

ಭೀಮ್ ಸಂಜೀವಿನಿ ಬೋಳಂತೂರು ಇದರ ವತಿಯಿಂದ ಒಂದು ದಿನದ ಸ್ವಚ್ಚತಾ ಶ್ರಮದಾನ

ಭೀಮ್ ಸಂಜೀವಿನಿ ಬೋಳಂತೂರು ಇದರ ವತಿಯಿಂದ ಶ್ರೀ ಮಹಮ್ಮಾಯಿ ಸನ್ನಿದ್ಧಿ ಬೋಳಂತೂರು ಮತ್ತು ಪರಿಶಿಷ್ಟ ಕಾಲೋನಿ ರಸ್ತೆ ಬಿ.ಆರ್. ನಗರ ಇದರ ಬಳಿ ಒಂದು ದಿನದ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

ಶ್ರೀ ಹರೀಶ್. ವಿ. ಶಾಲಾ ಶಿಕ್ಷಕರು ಬೋಳಂತೂರು ಇವರ ಮಾರ್ಗದರ್ಶನದಲ್ಲಿ ಶ್ರೀನಿವಾಸ್ ಬಂಗಾರುಕೋಡಿ ಇವರ ಅಧ್ಯಕ್ಷತೆಯಲ್ಲಿ ಒಂದು ದಿನದ ಸ್ವಚ್ಚತಾ/ ಶ್ರಮದಾನ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಭೀಮ್ ಸಂಜೀವಿನಿಯ ಗೌರವಧ್ಯಕ್ಷರಾದ ಸದಾನಂದ ಬಿ.ಆರ್.ನಗರ, ಪ್ರಧಾನ ಕಾರ್ಯದರ್ಶಿಯಾದ ಕೃಷ್ಣಪ್ಪ ಕಲ್ಲನೆ, ಜತೆ ಕಾರ್ಯದರ್ಶಿ ಮಹೇಶ್ ಕಲ್ಪನೆ, ಕೋಶಾಧಿಕಾರಿ ತಿಲಕ್ ಕೊಕ್ಕಪುಣಿ, ರಮೇಶ್ ಬೋಳಂತೂರು ಮತ್ತು ಸಂಘದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...