Friday, April 19, 2024

ಪ್ರಥಮ ದರ್ಜೆ ಕಾಲೇಜ್ ವಿಟ್ಲ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ತರಗತಿ ಕೋಣೆಯ ಸೌಂದರೀಕರಣ ಕಾರ್ಯಕ್ರಮದ ಸಮಾರೋಪ ಸಮಾರಂಭ

ವೀರಕಂಬ ಮಜಿ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬೆಲ್ ಕ್ಯಾಂಪಸ್ ಟು ಕಮ್ಯೂನಿಟಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಇದರ ಸಹಯೋಗದಲ್ಲಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇದರ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ವರ್ಣಗಳ ಚಿತ್ತಾರದೊಂದಿಗೆ ತರಗತಿ ಕೋಣೆಯ ಸೌಂದರೀಕರಣ ಕಾರ್ಯಕ್ರಮದ ಸಮಾರೋಪ ಸಮಾರಂಭ ಅ.25ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯರುವಾರಿಯಾದ ಸ್ಕೂಲ್ ಬೆಲ್ ನ ಚಿತ್ರಕಲಾವಿದ ಅರ್ಚನ್ ರವರು ಇಂದು ಸರಕಾರಿ ಶಾಲೆಗಳು ಮುಚ್ಚವ ಹಂತದಲ್ಲಿ ಇರುವುದು ಆತಂಕಕಾರಿಯಾದ ವಿಚಾರವಾಗಿದೆ. ಅವುಗಳ ಉಳಿವಿನ ಕಡೆಗೆ ಸ್ಕೂಲ್ ಬೆಲ್ ಸಂಸ್ಥೆಯು ಇಂತಹ ಹಲವಾರು ಕಾರ್ಯಕ್ರಮವನ್ನು ನಿರ್ವಹಿಸುತ್ತಿದೆ. ಬೇರೇ ಬೇರೆ ಯೋಜನೆಗಳ ಮೂಲಕ ಈ ಕೆಲಸವು ನಿರಂತರವಾಗಿ ನಡೆಯುತ್ತಿದೆ ಎಂದರು.

ಪ್ರಥಮ ದರ್ಜೆ ಕಾಲೇಜು ವಿಟ್ಲ ಉಪನ್ಯಾಸಕಿ ಜ್ಯೋತಿ ಮಾತನಾಡಿ ಜೀವನದಲ್ಲಿ ಅವಕಾಶಗಳು ಸಿಗೋದೇ ಕಷ್ಟ ಅಂತಹ ಸಂದರ್ಭದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡಾಗ ನಮ್ಮಲ್ಲಿ ಉತ್ತಮವಾದ ಬದಲಾವಣೆಗಳು ಆಗುತ್ತವೆ ಈ ರೀತಿಯಾಗಿ ನಮ್ಮಲ್ಲಿ ಕಲಿಕೆ ಆಗುತ್ತದೆ ಎಂದರು.

ಪ್ರಥಮ ದರ್ಜೆ ಕಾಲೇಜು ವಿಟ್ಲದ ಉಪನ್ಯಾಸಕರಾದ ಪದ್ಮನಾಭ ಮಾತನಾಡಿ ಶಿಕ್ಷಣದಲ್ಲಿ ಹಲವಾರು ಮಜಲುಗಳಿವೆ ಇದು ಒಂದು ನಿರಂತರ ಪ್ರಕ್ರಿಯೆ, ದಿನನಿತ್ಯದ ಕಲಿಕೆಗಳೇ ನಮಲ್ಲಿ ಹೊಸತನವನ್ನು ಮೂಡಿಸುತ್ತವೆ ಈ ಕಾರ್ಯಕ್ರಮವು ಮಕ್ಕಳಲ್ಲಿ ಕಲಾವಿದನನ್ನು ಹುಟ್ಟಿಸಿದೆ ಎಂದು ವಿಧ್ಯಾರ್ಥಿ ಗಳ ಕೆಲಸವನ್ನು ಶ್ಲಾಘಿಸಿದರು.

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಂತಿಮ ವರ್ಷ ವಿಧ್ಯಾರ್ಥಿಗಳಾದ ಸಫ್ವಾನ್ ಮತ್ತು ದೀಕ್ಷಿತಾ .ಪಿ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ಕಾರ್ಯನಿರ್ವಹಿಸಿದ ಸಂಸ್ಥಗಳಿಗೆ ನೆನಪಿನ ಕಾಣಿಕೆನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮಜಿ ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ, ಸದಸ್ಯರಾದ ವಿಶ್ವನಾಥ, ಹಿರಿಯ ಶಾಲಾ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಮೈರಾ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ನಿರೂಪಿಸಿ, ವಂದಿಸಿದರು

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...