Saturday, April 6, 2024

ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಪದ್ಧತಿ ಜಾರಿಗೊಳಿಸಲು ನಿರ್ಧಾರ : ಅರೋಗ್ಯ ಸಚಿವ ಡಾ. ಕೆ. ಸುಧಾಕರ್

ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ ಗಳಲ್ಲಿ ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದಕ್ಕೆ ಕಡಿವಾಣ ಹಾಕಲು ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಹೀಗೆ ಮೂರು ಬಾರಿ ವೈದ್ಯರು ಬಯೋಮೆಟ್ರಿಕ್ ಹಾಜರಿ ಹಾಕುವುದು ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ವೈದ್ಯರು ನಿಯಮ ಉಲ್ಲಂಘಿಸದಂತೆ ಜಿಯೋ ಟ್ಯಾಗ್ ಅಳವಡಿಸುವ ಹಾಗೂ ಕಚೇಇ ಅವಧಿ ಮುಗಿದ ಬಳಿಕ ಕಾಲೇಜಿನಲ್ಲಿಯೇ ಖಾಸಗಿಯ ಚಿಕಿತ್ಸೆ ನೀಡುವ ಅವಕಾಶವನ್ನು ವೈದ್ಯರಿಗೆ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...