Wednesday, April 10, 2024

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ: ಮುಂದಿನ ತಿಂಗಳು ಅಮ್ಮುಂಜೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಅ.9 ರಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ‌ ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಅಮ್ಮುಂಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ದ ಆಡಳಿತ ಟ್ರಸ್ಟೀ ಡಾ.ಎ.ಮಂಜಯ್ಯ ಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಕೋಶಾಧಿಕಾರಿ ಡಿ. ಬಿ. ಅಬ್ದುಲ್ ರಹಮಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಸುಗುಣ, ಅಮ್ಮಂಜೆ ಗ್ರಾ. ಪಂ. ಅಧ್ಯಕ್ಷ ವಾಮನ ಆಚಾರ್ಯ, ಕರಿಯಂಗಳ ಗ್ರಾಮ ಪಂಚಾಯತ್ ಪಿ.ಡಿ.ಒ ಮಾಲಿನಿ ಮತ್ತು ಅಮ್ಮುಂಜೆ ಗ್ರಾ. ಪಂ ಪಿಡಿಒ ನಯನ ಕುಮಾರಿ  ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಉದಯಶಂಕರ ನೀರ್ಪಾಜೆ, ವಿಟ್ಲ ಹೋಬಳಿ ಕಸಾಪ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಕಸಾಪ ಅಧ್ಯಕ್ಷ ಪಿ.ಮಹಮ್ಮದ್,
ಕಸಾಪ ಪದಾಧಿಕಾರಿ ಸಂಕಪ್ಪ ಶೆಟ್ಟಿ, ಝಫರಿನ್ ಡಿ ಸೋಜ, ಅಬ್ಬಾಸ್ ಅಲಿ, ಎಂ ಡಿ‌ ಮಂಚಿ, ರವೀಂದ್ರ ಕುಕ್ಕಾಜೆ, ಅನೀಶ್ ಬಾಳಿಕೆ, ಬಂಟ್ವಾಳ ಬಳಕೆದಾರರ ವೇದಿಕೆ ಸಂಚಾಲಕ ಸುಂದರ್ ರಾವ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಭೆಯನ್ನು ಸಂಯೋಜನೆ ಮಾಡಿದ ಕಸಾಪ ಪದಾಧಿಕಾರಿ ಅಬೂಬಕರ್ ಅಮ್ಮುಂಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮದ ರೂಪುರೇಷೆ ವಿವರಿಸಿದರು. ಉಪನ್ಯಾಸಕ ದಿನೇಶ್ ಶೆಟ್ಟಿ ಅಳಿಕೆ ಪ್ರಸ್ತಾವನೆ ಗೈದರು. ಬಿ.ಜನಾರ್ದನ ಅಮ್ಮುಂಜೆ ವಂದನಾರ್ಪಣೆ ಗೈದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...