Saturday, April 6, 2024

ಕುಲಾಲ ಸಂಘ (ರಿ.) ವಿಟ್ಲ ಇದರ ವಾರ್ಷಿಕ ಮಹಾಸಭೆ ಹಾಗೂ ಭಜನಾ ಕಾರ್ಯಕ್ರಮ

ವಿಟ್ಲ: ವಿಟ್ಲ ಕುಲಾಲ ಸಂಘ (ರಿ)ಇದರ ವತಿಯಿಂದ ನವರಾತ್ರಿ ಭಜನಾ ಕಾರ್ಯಕ್ರಮವು ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆಯಿತು.

ಬಳಿಕ ಸಂಘದ ಅಧ್ಯಕ್ಷ ಬಿ.ಕೆ ಬಾಬು ರವರ ಅಧ್ಯಕ್ಷತೆಯಲ್ಲಿ ಕುಲಾಲ ಸಂಘದ ವಾರ್ಷಿಕ ಮಹಾಸಭೆ  ನಡೆಯಿತು. ಈ ವೇಳೆ 2021-22ರ ಸಾಲಿನ ಲೆಕ್ಕಪತ್ರವನ್ನು ಸಂಘದ ಕೋಶಾಧಿಕಾರಿ ಅಚ್ಚುತ ಕಟ್ಟೆ ಮಂಡಿಸಿದರು. ಬಳಿಕ ಮುಂದಿನ ವರ್ಷದಲ್ಲಿ ನಡೆಯಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಬಳಿಕ 2022 ರಿಂದ 2024ರ ಕಾರ್ಯಕಾರಿ ಸಮಿತಿಯ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಬಿ.ಕೆ ಬಾಬು ರವರು ಎರಡನೇ ಬಾರಿಗೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ವೀರಪ್ಪ ಮೂಲ್ಯ ಪುಣಚ ಉಪಾಧ್ಯಕ್ಷರಾಗಿ ರಾಧಾಕೃಷ್ಣ ಎ ಹಾಗೂ ನಾರಾಯಣ ಪುಣಚ, ಕಾರ್ಯದರ್ಶಿಗಳಾಗಿ ರಮೇಶ ಪುಣಚ ನೆಕ್ಕರೆಕಾನ, ಜೊತೆ ಕಾರ್ಯದರ್ಶಿಯಾಗಿ ಅರುಣಾಕರ ಪೆರುವಾಜೆ ಕೋಶಾಧಿಕಾರಿಯಾಗಿ ಅಚ್ಚುತ ಕಟ್ಟೆ, ಸಂಘಟನಾ ಕಾರ್ಯದರ್ಶಿ ಶೀನ ಮೂಲ್ಯ ಅಡ್ಯನಡ್ಕ, ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಚಂದಳಿಕೆ, ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕಲಾರಸಿಕ ಹಾಗೂ 15 ಜನ ಸದಸ್ಯರನ್ನು ಒಳಗೊಂಡಂತೆ ಕಾರ್ಯಕಾರಿ ಸಮಿತಿ ರಚಿಸಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾಗಿ ಸುಚಿತ್ರಾ ರಮಾನಾಥ ವಿಟ್ಲ ಎರಡನೇ ಬಾರಿ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹಿನಿ ಎಣ್ಣೆದಕಲ ಹಾಗೂ ಚೇತನ ಕಟ್ಟೆ, ಕಾರ್ಯದರ್ಶಿಗಳಾಗಿ ಮೀನಾಕ್ಷಿ ನಾರಾಯಣ ಪುಣಚ ಜೊತೆ ಕಾರ್ಯದರ್ಶಿಯಾಗಿ ಉಷಾ ವಸಂತ್ ಎರುಂಬು, ಕೋಶಾಧಿಕಾರಿಯಾಗಿ ವಾರಿಜಾ ಬಾಬು ಮೂಲ್ಯ ಮಾರ್ನೆಮಿಗುಡ್ಡೆ, ಸಾಂಸ್ಕೃತಿಕ ಕಾರ್ಯದರ್ಶಿ ಶಾರದಾ ಮಾಮೇಶ್ವರ ಕ್ರೀಡಾ ಕಾರ್ಯದರ್ಶಿ ಗೀತಾ ಅಡ್ಯನಡ್ಕ, ಸಂಘಟನಾ ಕಾರ್ಯದರ್ಶಿ ಪ್ರೇಮ ಕುಂಡಡ್ಕ ಹಾಗೂ 13 ಜನ ಸದಸ್ಯರ ಒಳಗೊಂಡಂತೆ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಆಗಮಿಸಿದ ಸದಸ್ಯರೆಲ್ಲರೂ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

ಕಾರ್ಯದರ್ಶಿ ರಮೇಶ್ ಕುಲಾಲ್ ನೆಕ್ಕರೆಕಾನ ಅಜ್ಜಿನಡ್ಕ, ಕಟ್ಟಡ ಸಮಿತಿ ಅಧ್ಯಕ್ಷ ರಮನಾಥ್ ವಿಟ್ಲ ಉಪಸ್ಥಿತರಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಸುಚಿತ್ರ ರಮನಾಥ್ ವಿಟ್ಲ ವರದಿ ವಾಚಿಸಿದರು. ವಾರಿಜ ಬಾಬು ಮೂಲ್ಯ ಸ್ವಾಗತಿಸಿ, ಸುರೇಶ್ ಕಲಾರಸಿಕ ನಿರೂಪಿಸಿದರು.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...