Wednesday, April 10, 2024

ನಿವೃತ್ತಿ ಹಾಗೂ ಪದೋನ್ನತಿ ಹೊಂದಿದ ಬಂಟ್ವಾಳ ಕಂದಾಯ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆಯಲ್ಲಿ
ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಪಿ.ಸಿ. ಥೋಮಸ್ ಹಾಗೂ ಪದೋನ್ನತಿ ಹೊಂದಿದ ಕಂದಾಯಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭವು  ಬಿ.ಸಿ.ರೋಡಿನ ಸರ್ಕಾರಿ ನೌಕರರ ಸಭಾಭವನದಲ್ಲಿ ತಹಶೀಲ್ದಾರರಾದ ಡಾ| ಸ್ಮಿತಾ ರಾಮು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ| ಸ್ಮಿತಾ ರಾಮು ಅವರು, ವೃತ್ತಿಯಲ್ಲಿ ಮುಳುಗಿದ್ದಾಗ ವೈಯಕ್ತಿಕ ಜೀವನವನ್ನು ಕಡೆಗಣಿಸುವ ಸನ್ನಿವೇಶಗಳು ಎದುರಾಗುತ್ತವೆ. ಇವೆಲ್ಲವನ್ನೂ ಸಮರ್ಥವಾಗಿ ಎದುರಿಸಿ ಪದೋನ್ನತಿ ಹಾಗೂ ನಿವೃತ್ತಿ ಹೊಂದುತ್ತಿರುವ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ಮೇರಾವು ಇವರು ಮಾತನಾಡಿ ಸರ್ಕಾರಿ ನೌಕರರಿಗೆ ಜನ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇದನ್ನು ಸಂಪೂರ್ಣವಾಗಿ ಉಪಯೋಗಿಸಿ ಎಂದು ಕಿವಿಮಾತು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.
ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಪಿ.ಸಿ. ಥೋಮಸ್, ಪದೋನ್ನತಿ ಹೊಂದಿದ ರೇಖಾ ಯಂ, ಕುಮಾರ್ ಟಿ.ಸಿ., ಪ್ರಕಾಶ್ ಪಿ, ಪ್ರಶಾಂತ್ ಟಿ ಎಸ್, ಶಶಿ ಕುಮಾರ್, ಸುರೇಶ್, ಮಹೇಂದ್ರ, ಪವಿತ್ರ, ರಾಜು ಲಮಾಣಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಹೋದ್ಯೋಗಿಗಳು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್, ಕೇಂದ್ರಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರರಾದ ರಾಜೇಶ್ ನಾಯ್ಕ್, ದಿವಾಕರ ಮುಗುಲ್ಯ, ವಿಜಯ್ ವಿಕ್ರಮ್, ಉಪನೋಂದಣಾಧಿಕಾರಿ ಕವಿತಾ, ಕಂದಾಯ ನಿರೀಕ್ಷಕರಾದ ವಿಜಯ್ .ಆರ್ ತಾಲೂಕು ಕಛೇರಿ ಸಿಬ್ಬಂದಿ ವರ್ಗ, ಗ್ರಾಮಕರಣಿಕರು, ಗ್ರಾಮ ಸಹಾಯಕರು ಹಾಜರಿದ್ದರು.
ಉಪತಹಶೀಲ್ದಾರರಾದ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ಜನಾರ್ಧನ್. ಜೆ ಧನ್ಯವಾದ ಸಮರ್ಪಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...