Sunday, April 7, 2024

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಪಡಿಬಾಗಿಲು ನಿವಾಸಿ ಬಾಲು ಪೂಜಾರಿ ( 60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು, ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ‌
ಈ ಹಿಂದೆಯೂ ಆತ್ಮಹತ್ಯೆ ಗೆ ಪ್ರಯತ್ನಿಸಿ ಬದುಕಿ ಉಳಿದ್ದಿದ್ದ ಎನ್ನಲಾಗಿದೆ .
ಮೂರು ವರ್ಷದ ಹಿಂದೆ ಈತ ವಿಷ ಪದಾರ್ಥ ಪೆರಢಾನ್ ಸೇವಿಸಿ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದ ಎನ್ನಲಾಗಿದೆ .
ವಿವಾಹಿತನಾಗಿದ್ದು, ಈತನಿಗೆ 4 ಹೆಣ್ಣು ಹಾಗೂ ಮೂರು ಗಂಡು ಮಕ್ಕಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...