Monday, April 8, 2024

ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ಇಂದು ನೇರ ಕಾರ್ಯಾಚರಣೆಗೆ ಕರೆ ; ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಮಂಗಳೂರು: ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ಇಂದು ನೇರ ಕಾರ್ಯಾಚರಣೆಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಭದ್ರತೆ ಏರ್ಪಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಸುರತ್ಕಲ್ ಟೋಲ್ ತೆರವಿಗೆ ಇಂದು ಪ್ರತಿಭಟನೆಗೆ ಸಂಘಟನೆಗಳು ನಿರ್ಧರಿಸಿವೆ. ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಭದ್ರತೆ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಸಮಸ್ಯೆ ಆಗಬಾರದು. ಅಗತ್ಯ ಅನಿಸುವಷ್ಟು ನಾವು ಪೊಲೀಸರನ್ನ ಭದ್ರತೆಗೆ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳ ಪೊಲೀಸರನ್ನ ಭದ್ರತೆಗೆ ಹಾಕಿದ್ದೇವೆ. ಬಹುತೇಕ 300ಕ್ಕೂ ಅಧಿಕ ಪೊಲೀಸರು, ಕೆಎಸ್​ಆರ್​ಟಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಟೋಲ್ ಸಂಸ್ಥೆ ರಕ್ಷಣೆ ಕೇಳಿದ್ದಾರೆ. ಹೀಗಾಗಿ ನಾವು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಭದ್ರತೆ ಹಾಕಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಕಾರ್ಯಾಚರಣೆ ಅಂತ ಪೋಸ್ಟ್ ಹಾಕಲಾಗಿತ್ತು. ಹೀಗಾಗಿ ಹಲವು ಹೋರಾಟಗಾರರಿಗೆ ನಾವು ನೋಟೀಸ್ ನೀಡಿದ್ದೇವೆ. ಇದರಲ್ಲಿ ಕೆಲವರ ಮನೆಗೆ ರಾತ್ರಿ ನೋಟಿಸ್ ಕೊಡಲು ಹೋದಾಗ ತಡವಾಗಿದೆ. ಆದರೆ ನಿಯಮ ಪ್ರಕಾರವೇ ನಾವು ನೋಟಿಸ್ ಕೊಟ್ಟಿದ್ದೇವೆ ಎಂದು ಹೇಳಿದರು.

ಹೋರಾಟದ ಪ್ರಮುಖ ಮುಖಂಡರು ಶಾಂತಿಯುತ ಪ್ರತಿಭಟನೆ ಅಂತ ಹೇಳಿದ್ದಾರೆ. ಈ ಹಿಂದೆಯೂ ಇವರ ಪ್ರತಿಭಟನೆ ಶಾಂತಿಯುತವಾಗಿ ಇತ್ತು. ಹೀಗಾಗಿ ಇವತ್ತು ಕೂಡ ಶಾಂತಿಯುತ ಪ್ರತಿಭಟನೆ ಮಾಡಬಹುದು. ಈ ಹೆದ್ದಾರಿ ಅತ್ಯಂತ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಆಗಿದೆ. ಹೀಗಾಗಿ ಇಲ್ಲಿ ಯಾವುದೇ ವಾಹನ ಮತ್ತು ಜನ ಸಂಚಾರಕ್ಕೆ ಸಮಸ್ಯೆ ಆಗಬಾರದು ಎಂದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...