Saturday, April 6, 2024

ಹಿರಿಯ ನಾಗರಿಕರಿಗೆ ಕಾನೂನು ಮಾಹಿತಿ ಶಿಬಿರ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಮಾಹಿತಿ ಶಿಬಿರ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಧೀಶೆ ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಅವರು, ಸಮಾಜದ ಅಭ್ಯುದಯಕ್ಕೆ ಹಿರಿಯರು ಆಲದ ಮರವಿದ್ದಂತೆ, ತಂದೆ ತಾಯಿಯನ್ನು ಗೌರವಿಸುವ ಕೆಲಸ ಯುವ ಸಮುದಾಯದಿಂದ ಆಗಬೇಕಾಗಿದೆ. ಹಿರಿಯರನ್ನು ಕಡೆಗಣಿಸುವ ಪ್ರವೃತ್ತಿಯನ್ನು ಯುವ ಸಮುದಾಯ ದೂರ ಮಾಡಬೇಕು ಎಂದು ಅವರು ಎಂದ ಅವರು ತಂದೆ ತಾಯಿಗಳನ್ನು ಮಕ್ಕಳು ಸರಿಯಾಗಿ ನೋಡಿಕೊಳ್ಳದಿದ್ದರೆ, ಅವರು ಪೋಲಿಸ್ ಕಮೀಶನರ್ ಅವರಿಗೆ ದೂರು ನೀಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ್ ವೈ ತಳವಾರ ಅವರು ಮಾತನಾಡಿ, ತಾಂತ್ರಿಕ ಯುಗದಲ್ಲಿ ಸಂಸ್ಕಾರಗಳು ಮಾಯವಾಗುತ್ತ ಬರುತ್ತಿರುವುದು ವಿಷಾಧನೀಯ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.

ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಮಹಮ್ಮದ್ ಗಝಾಲಿ ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು, ಸಹಾಯಕ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ ಡಿ. ಉಪಸ್ಥಿತರಿದ್ದರು.

‌‌ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ಶಾಲಿನಿ ವಂದಿಸಿದರು. ಮೇಲ್ವಿಚಾರಕಿ ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...