Thursday, April 11, 2024

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ : ಪೊಲೀಸ್ ಬಂದೋಬಸ್ತ್

ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಶುರುವಾಗಿದೆ.

ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಕಾವೇರಿ, ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳಲಿದ್ದಾಳೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲ್ಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತಿದೆ. ಆದ್ರೆ ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದ್ರೆ ಭಕ್ತರ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ತಲಕಾವೇರಿಯಲ್ಲಿ ಪೊಲೀಸ್ ಬಂದೋಬಸ್ತ್

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...