Monday, September 25, 2023
More

    ಮಹಾತ್ಮ ಗಾಂಧಿ ಜಯಂತಿ ಆಚರಣೆ

    Must read

    ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ತಾಲೂಕು ಮಟ್ಟದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮ ರವಿವಾರ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
    ಬಂಟ್ವಾಳ ತಹಶೀಲ್ದಾರ್ ಡಾ| ಸ್ಮಿತಾ ರಾಮು ಅವರು ಮಾತನಾಡಿ, ಸಮಾಜದಲ್ಲಿ ಸತ್ಯ, ಶಾಂತಿ, ಅಹಿಂಸೆಗಳ ಜತೆಗೆ ಸಹಿಷ್ಣುತೆಯನ್ನು ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿಯವರು ಭಾರತ ಮಾತ್ರವಲ್ಲದೆ ಜಗತ್ತಿನಲ್ಲೇ ಶ್ರೇಷ್ಠರಾಗಿ ಗುರುತಿಸಿಕೊಂಡಿದ್ದಾರೆ. ಗ್ರಾಮ ಸ್ವರಾಜ್ಯದಂತಹ ಕಲ್ಪನೆಯ ಮೂಲಕ ಅತ್ಯುತ್ತಮ ವ್ಯವಸ್ಥೆಯನ್ನು ಕಲ್ಪಿಸಿ ಹಳ್ಳಿಗಳ ದೇಶವಾದ ಭಾರತದ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ ಎಂದರು.
    ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್ ರೈ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವನಿತಾ, ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ ಡಿ, ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
    ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.

    More articles

    LEAVE A REPLY

    Please enter your comment!
    Please enter your name here

    Latest article