ಇಂದು ನವರಾತ್ರಿ ಹಬ್ಬದ ಪ್ರಯುಕ್ತ ಬಿ.ಸಿ ರೋಡ್ ಶ್ರೀ ರಕ್ತೇಶ್ವರೀ ದೇವೀ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ಮತ್ತು ಮಹಾಚಂಡಿಕಾ ಯಾಗ ನಡೆಯಿತು.

ಈ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಇನ್ನು ಶರನ್ನವರಾತ್ರಿ ಮಹೋತ್ಸವದ ಹಿನ್ನಲೆ ಕ್ಷೇತ್ರಕ್ಕೆ ನೂರಾರು ಭಕ್ತರು ಆಗಮಿಸಿ, ಶ್ರೀ ದೇವಿಯ ದರ್ಶನ ಪಡೆದು ಪುನೀತರಾದರು.