Thursday, April 18, 2024

ಕೊಲೆ ಯತ್ನ ಪ್ರಕರಣ, ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘ ಅವಧಿಯಿಂದ (LPC) ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ

ಬಂಟ್ವಾಳ: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘ ಅವಧಿಯಿಂದ (LPC) ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕೂಬ್ ಅವರ ಮಗ ಮಹಮ್ಮದ್ ಫಾರೂಕ್ ಎಂಬಾತ ಬಂಧಿತ ಆರೋಪಿ.
ಬಂಟ್ವಾಳ ‌ನಗರ ಪೋಲಿಸ್ ಠಾಣಾ ವ್ಯಾಪ್ತಿಯ ‌ಬಿಸಿರೋಡಿನಲ್ಲಿ 2007 ರ ಇಸವಿಯಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ವ್ಯಕ್ತಿಯೋರ್ವನ ಕೊಲೆಯತ್ನ ನಡೆಸಿದ ಆರೋಪದಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಆದರೆ ಕಳೆದ 15 ವರ್ಷಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದ.
ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ , ಬಂಟ್ವಾಳ ನಗರ ಪೋಲಿಶ್ ಇನ್ಸ್ ಪೆಕ್ಟರ್ ವಿವೇಕನಂದ ಹಾಗೂ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ಧನರಾಜ್ , ಗಣೇಶ್, ರಾಜೇಶ್, ಇರ್ಷಾದ್ ಅವರ ತಂಡ ಆರೋಪಿಯನ್ನು ಕೇರಳ ರಾಜ್ಯದ ಬಂದ್ಯೋಡು ಎಂಬಲ್ಲಿಂದ ದಸ್ತಗಿರಿ ಮಾಡಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...