Thursday, April 18, 2024

ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ದಿನಕ್ಕೊಂದು ವಿಘ್ನ : 3ನೇ ದಿನ ದಿನ ಚಕ್ರ ಜಾಮ್‌, ಆಮೇಲೆ ಏನಾಯ್ತು…?

ನವದೆಹಲಿ: ಮೊನ್ನೇ ಮೊನ್ನೇ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಆದ್ರೆ, ಈ ರೈಲಿಗೆ ದಿನಕ್ಕೊಂದು ವಿಘ್ನಗಳು ಎದುರಾಗುತ್ತಲೇ ಇವೆ.

ಚಾಲನೆ ಕೊಟ್ಟ ಮೊದಲ ದಿನವೇ ಎಮ್ಮೆ ಡಿಕ್ಕಿ ಹೊಡೆದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಾನಿಯಾಗಿತ್ತು. ಬಳಿಕೆ ಎರಡನೇ ದಿನ ಹಸುಗೆ ಡಿಕ್ಕಿ ಹೊಡೆದಿತ್ತು. ಇದೀಗ ಇಂದು ಮೂರನೇ ದಿನ ರೈಲಿನ ಚಕ್ರಗಳು ಜಾಮ್ ಆಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.

ಹೌದು….ದೆಹಲಿಯಿಂದ ವಾರಣಸಿಗೆ ತೆರಳುತ್ತಿದ್ದ ರೈಲು 67 ಕಿಲೋ ಮೀಟರ್ ಚಲಿಸಿ ಬುಲಂದ್‌ಶಹರ್ ರೈಲು ನಿಲ್ದಾಣ ತಲುಪುತ್ತಿದ್ದಂತೆ ಚಕ್ರಗಳು ಜಾಮ್ ಆಗಿವೆ. ಚಕ್ರಗಳು ಜಾಮ್ ಆಗಿರುವುದನ್ನು ಗಮನಿಸಿದ ಸಿಬ್ಬಂದಿಗಳು ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಇದರಿಂದ ಅತೀ ದೊಡ್ಡ ಅವಘಡ ತಪ್ಪಿದಂತಾಗಿದೆ. ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್‌ಪ್ರೆಸ್ ರೈಲಿಗೆ ಶಿಫ್ಟ್ ಮಾಡಲಾಯಿತು.

ಬುಲಂದ್‌ಶಹರ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ರೈಲನ್ನು ಸಿಬ್ಬಂದಿ ಚಕ್ರಗಳ ಪರಿಶೀಲನೆ ನಡೆಸಿದರು.

ಬೆಳಗ್ಗೆ 7.20ಕ್ಕೆ ಬುಲಂದ್‌ಶಹರ್ ನಿಲ್ದಾಣದಲ್ಲಿ ಚಕ್ರ ಸಮಸ್ಯೆಯಿಂದ ರೈಲು ನಿಲ್ಲಿಸಲಾಯಿತು. ಬಳಿಕ ಖುರ್ಜಾ ರೈಲು ನಿಲ್ದಾಣಕ್ಕೆ ತಲುವಾಗ ಮಧ್ಯಾಹ್ನ 12.40 ಆಗಿದೆ. ಇನ್ನು ಖುರ್ಜಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್‌ಪ್ರೆಸ್ ರೈಲಿಗೆ ಶಿಫ್ಟ್ ಮಾಡಲಾಯಿತು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...