Friday, April 12, 2024

ರೈಲು ಹಳಿ ದಾಟುವಾಗ ದುರ್ಘಟನೆ : ರೈಲು ಇಂಜಿನ್ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

ಕಡಬ: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ ನೆಟ್ಟಣದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಓಟೆಕಜೆ ನಾಗಣ್ಣ ಅವರ ಮಗಳು ಭಾಗವಹಿಸಿದ್ದ ಕ್ರೀಡಾಕೂಟಕ್ಕೆ ತೆರಳಿ ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಎಂಬವರ ಜೊತೆ ಬಂದಿಳಿದಿದ್ದರು. ಬಳಿಕ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಡುತ್ತಿದ್ದಾಗ ಏಕಾಏಕಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ನಾಗಣ್ಣ ಅವರ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

 

 

More from the blog

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...