Friday, April 5, 2024

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ.

ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಇದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ ಅವರನ್ನು ನಂಬುವ ಹಾಗಿಲ್ಲ. ಪ್ರತಿಭಟನೆ ಎದುರಿಸಲು ಜಿಲ್ಲಾಡಳಿತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ಇದರಿಂದ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಲ್ಲಿಂದ ಟೋಲ್ ಗೇಟ್ ತೆರವುಗೊಳ್ಳುವ ತನಕ ಹಗಲು ರಾತ್ರಿ ಹೋರಾಟ ಮುಂದುವರಿಯಲಿದೆ ಎಂದರು.

ಡಿವೈ ಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್, ರಾಘವೇಂದ್ರ ರಾವ್, ಎಂ. ಜಿ ಹೆಗಡೆ, ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತಿತರರು ಧರಣಿ ಬಾಗಿಯಾಗಿದ್ದರು.

 

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...