Saturday, April 6, 2024

ಒಕ್ಕೂಟ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ಶಾಲಾ ಕೊಠಡಿಗಳ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ವಿರಕಂಬ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಜಿ ವಿರಕಂಬ ಇಲ್ಲಿ ಸ್ಕೂಲ್ ಬೆಲ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಹಾಗೂ ವಿಟ್ಲ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮಕ್ಕಳು ಶಾಲಾ ಕೊಠಡಿಗಳನ್ನು ಅಲಂಕಾರ ಮಾಡುವಾಗ ಕೊಠಡಿಗಳ ನೆಲದ ಹಾಗೂ ಜಗಲಿಗಳ ಮೇಲೆ ಆದ ಬಣ್ಣದ ಕಲೆಗಳ ಸ್ವಚ್ಛತೆ ಮಾಡಿ ಉತ್ತಮ ರೀತಿಯಲ್ಲಿ ತರಗತಿ ನಡೆಸಲು ವ್ಯವಸ್ಥೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ವಿರಕಂಬ ಶ್ರೀ ಶಾರದಾ ಭಜನಾ ಮಂದಿರದ ಭಜನಾ ಮಂಡಳಿಯ ಸದಸ್ಯರು ಹಾಗೂ ಶಾಲಾ ಹಿರಿಯ ವಿದ್ಯಾರ್ಥಿಗಳು ಅವರೊಂದಿಗೆ ಸೇರಿಕೊಂಡು ಸ್ವಚ್ಛತಾ ಕಾರ್ಯದಲ್ಲಿ ಸಹಕರಿಸಿದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...