Wednesday, April 17, 2024

ವಾಕಿಂಗ್ ನಿರತ ವ್ಯಕ್ತಿಗೆ ಲಾರಿ ಢಿಕ್ಕಿ : ಪಾದಚಾರಿ ಸಾವು

ಮಂಗಳೂರು: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಕೊಟ್ಟಾರ ಚೌಕಿಯಲ್ಲಿ ನಡೆದಿದೆ.
ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇನ್ನು ಅಪಘಾತದಲ್ಲಿ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಘಟನೆ ಕುರಿತು ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...