Saturday, April 6, 2024

ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ : ನ.6ರಂದು ನಿರತದ ಬೆಳ್ಳಿಹಬ್ಬ, ಪ್ರಶಸ್ತಿ ಪ್ರದಾನ

ಬಂಟ್ವಾಳ: ನಿರತ ಸಾಹಿತ್ಯ ಸಂಪದ, ಕಡೆಗೋಳಿ ಬಂಟ್ವಾಳ ಇದರ ಈ ಬಾರಿಯ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ ಇವರ ವಿಶೇಷ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ ೬ರಂದು ಬಿಸಿರೋಡ್‌ನ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ನಿರತದ ೨೫ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
೧೯೯೬ರಲ್ಲಿ ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ ಪ್ರಾರಂಭಗೊAಡ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವು ದಿಗ್ಗಜರಿಗೆ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
ಕೆ.ವಿ ಚಂದ್ರಕಲಾ ನಂದಾವರ: ೧೯೫೦ರಲ್ಲಿ ಜನಿಸಿದ ಇವರು ತಮ್ಮ ಸ್ನಾತಕೋತ್ತರ ಶಿಕ್ಷಣದ ಬಳಿಕ ಶಿಕ್ಷಕಿ, ಉಪನ್ಯಾಸಕಿ ಹಾಗೂ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ ಸದ್ಯ ನಿವೃತ್ತರಾಗಿದ್ದಾರೆ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇವರು ಈ ನಡುವೆ ಹಲವಾರು ಕೃತಿ, ಕವನ ಸಂಕಲನ, ಲೇಖನ ಸಂಕಲನಗಳನ್ನು, ಅಧ್ಯಯನಾತ್ಮಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಕೊಡುಗೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ರಾಜ್ಯಮಟ್ಟದ ಪ್ರಶಸ್ತಿಗಳು ಅರಸಿ ಬಂದಿತ್ತು. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರ ಇನ್ನೊಂದು ಕೃತಿಯು ಬಿಡುಗಡೆಗೆ ಸಿದ್ಧಗೊಂಡಿದೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...