ವಿಟ್ಲ: ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರ ಹುಡುಕಿಕೊಂಡು ಬಂದ ಊರಿನವ ಯುವಕರು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಸಾಲೆತ್ತೂರು ನಿವಾಸಿ ಆಟೋ ಚಾಲಕನ ಪುತ್ರಿ ತನ್ನ ಸ್ನೇಹಿತೆ ಮತ್ತೊಬ್ಬಳು ಯುವತಿ ಜತೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಬಿಟ್ಡು ತೆರಳಿದ್ದರು.ಈ ಬಗ್ಗೆ ಎಲ್ಲ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಕೆಲ ಸ್ವಯಂ ಘೋಷಿತ ಸಮಾಜ ಸೇವಕರು ಅವರನ್ನು ಹುಡುಕಲು ಪ್ರಾರಂಭಿಸಿದ್ದಾರೆ. ವಿಟ್ಲಯಲ್ಲಿ ಹುಡುಕಾಡುತ್ತಿದ್ದಾಗ ಕುದ್ದುಪದವು ಮೂಲದ ಇಬ್ಬರು ಯುವತಿಯರು ಕಾಣಿಸಿದ್ದು, ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಬುರ್ಖಾ ತೆಗೆದಾಗ ಅವರು ಬೇರೆಯವರು ಎಂದು ತಿಳಿದಾಗ ಪೇಚಿಗೆ ಸಿಲುಕಿದ್ದಾರೆ. ಬಳಿಕ ಸಾರ್ವಜನಿಕರು ಹಲ್ಲೆ ನಡೆಸಿದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಾಪತ್ತೆಯಾಗಿದ್ದ ಇಬ್ಬರು ಪುತ್ತೂರು ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದು, ಅವರನ್ನು ವಿಟ್ಲ ಠಾಣೆಗೆ ಕರೆಯಿಸಿ, ಬುದ್ದಿವಾದ ಹೇಳಿ ಮನೆಯವರ ಜತೆ ಕಳುಹಿಸಿಕೊಟ್ಟಿದ್ದಾರೆ.
ಹಲ್ಲೆಗೊಳಗಾದ ಇಬ್ಬರು ಬಾಲಕಿಯರು ಆಸ್ಪತ್ರೆಗೆ ದಾಖಲಾಗಿದ್ದು, ವಿಟ್ಲ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.