Monday, April 15, 2024

ಯಕ್ಷಗಾನ ವೇಷ ತೊಟ್ಟು ಮಿಂಚಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌

ಕಾರವಾರ: ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಅವರು ಯಕ್ಷಗಾನ ವೇಷ ತೊಟ್ಟು ಗಮನಸೆಳೆದಿದ್ದಾರೆ.

ಉತ್ತರ ಕನ್ನಡದ ಭಟ್ಕಳ ಶಾಸಕ ಸುನೀಲ್​​ ನಾಯ್ಕ್​​​ ಅವರ ಮನೆಯಲ್ಲಿ ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು, ಸಚಿವ ಡಾ.ಕೆ ಸುಧಾಕರ್‌ ಅವರು ಸರ್ಕಾರಿ ಆಸ್ಪತ್ರೆಯ ಪರಿಶೀಲನೆಗಾಗಿ ಭಟ್ಕಳಕ್ಕೆ ಆಗಮಿಸಿದ್ದರು.‌ಈ ವೇಳೆ ಸಚಿವ ಕೋಟಾ ‌ಶ್ರೀನಿವಾಸ ಪೂಜಾರಿ, ಹಾಗೂ ಶಾಸಕ ಸುನೀಲ್ ನಾಯ್ಕ ಜೊತೆ ಬಿಡುವು ಮಾಡಿಕೊಂಡು ಯಕ್ಷಗಾನವನ್ನು ನೋಡಿದ್ದಾರೆ.

ಬಳಿಕ ಯಕ್ಷಗಾನ ನೋಡುತ್ತಾ ಖುಷಿಪಟ್ಟ ಡಾ.ಕೆ ಸುಧಾಕರ್‌ ಅವರು ಕೊನೆಗೆ ಸ್ವಯಂ ಪ್ರೀತಿಯಿಂದ ಯುವರಾಜನ ವೇಷದ ಕಿರೀಟ ತೊಟ್ಟು, ಅಬ್ಬರದ ವೇಷಭೂಷಣಗಳನ್ನು ಧರಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಸದ್ಯ ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿವೆ

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...