Tuesday, April 9, 2024

ಚಿಕಿತ್ಸೆ ಫಲಕಾರಿಯಾಗದೇ ಆರ್ಮಿ ಡಾಗ್​ ಜೂಮ್ ಸಾವು : ಫಲಿಸಲೇ ಇಲ್ಲ ಪ್ರಾರ್ಥನೆ

ಶ್ರೀನಗರ: ಉಗ್ರರು ಹಾಗೂ ಭಾರತ ಸೇನೆಯ ಯೋಧರ ನಡುವೆ ನಡೆದ ಕಾಳಗದಲ್ಲಿ ಗುಂಡೇಟು ತಿಂದು ಗಂಭೀರವಾಗಿ ಗಾಯಗೊಂಡಿದ್ದ ಆರ್ಮಿ ಡಾಗ್ ಜೂಮ್’ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಟ್ಯಾಂಗ್ಪಾವಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತ್ತಿದ್ದ ಮನೆಯಲ್ಲಿ ಅ. 09ರ ತಡರಾತ್ರಿ ಕಾರ್ಯಾಚರಣೆ ನಡೆದಿತ್ತು.ಇನ್ನು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಜೂಮ್ ದೇಹಕ್ಕೆ ಎರಡು ಗುಂಡು ಹೊಕ್ಕಿತ್ತು.ಆದರೂ ತನ್ನ ಕರ್ತವ್ಯವನ್ನು ನಿರ್ವಹಿಸಿದ್ದ ಜೂಮ್​​, ಇಬ್ಬರು ಉಗ್ರರನ್ನು ಎನ್​ಕೌಂಟರ್ ಮಾಡಲು ನೆರವು ನೀಡಿತ್ತು. ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಶ್ವಾನವನ್ನು ಸೇನೆಯ ಪಶು ಆಸ್ಪತ್ರೆಗೆ ದಾಖಲು ಮಾಡಿ, ಶಸ್ತ್ರ ಚಿಕಿತ್ಸೆ ನಡೆಸಿ ಆರೈಕೆ ಕೊಡಿಸಲಾಗಿತ್ತು. ಈ ಕುರಿತಂತೆ ಮಾಹಿತಿ ನೀಡಿ ಸೇನೆಯ ಅಧಿಕಾರಿಗಳು ಟ್ವೀಟ್ ಮಾಡಿದ್ದರು.

ಮೃತ ಜೂಮ್​ ಅತ್ಯುತ್ತಮವಾಗಿ ತರಬೇತಿ ಪಡೆದ, ಉಗ್ರ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸೋ ಶ್ವಾನವಾಗಿತ್ತು. ಅದಕ್ಕೆ ಅಡಗಿ ಕುಳಿತಿದ್ದ ಉಗ್ರರನ್ನು ಪತ್ತೆ ಮಾಡೋ ಬಗ್ಗೆ ಹಾಗೂ ಉಗ್ರರನ್ನು ಸೆದೆಬಡಿಯಲು ವಿಶೇಷ ತರಬೇತಿ ನೀಡಲಾಗಿತ್ತು. ದಕ್ಷಿಣ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆದ ಅನೇಕ ಸರ್ಚ್​ ಆಪರೇಷನ್​​​ ಕಾರ್ಯಗಳಲ್ಲಿ ಭಾಗಿಯಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...