Sunday, April 14, 2024

ಬಂಟ್ವಾಳ ತಾಲೂಕು 16ನೇ ಮಕ್ಕಳ ಸಾಹಿತ್ಯ ಸಮ್ಮೇಳನ : ಸಮ್ಮೇಳನದ ಅಧ್ಯಕ್ಷರಾಗಿ ವಿದ್ಯಾರ್ಥಿನಿ ಶ್ರುತಿಕಾ ಆಯ್ಕೆ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಓಜಾಲ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ 13-12-2022ರಂದು ನಡೆಸಲಾಗುವುದು.

ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಈ ಸಮ್ಮೇಳನದ ಅಧ್ಯಕ್ಷರಾಗಿ ಆತಿಥೇಯ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಶ್ರುತಿಕಾ ಆಯ್ಕೆಯಾಗಿರುತ್ತಾರೆ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿದ್ದಾರೆ.

ಶ್ರುತಿಕಾ ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲೇ ಸಾಹಿತ್ಯರಚನೆಯಲ್ಲಿ ತೊಡಗಿಸಿಕೊಂಡಿರುವ
ಈ ವಿದ್ಯಾರ್ಥಿನಿ ಉತ್ತಮ ಮಾತುಗಾರ್ತಿ. ಆಕೆಯ ಹಲವಾರು ಕವನಗಳು ಹಸ್ತಪ್ರತಿಯಲ್ಲಿವೆ. ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಶ್ರುತಿಕಾಳ
ಚೊಚ್ಚಲ ಕವನ ಸಂಕಲನವು ಬಿಡುಗಡೆಗೊಳ್ಳಲಿದೆ. ಆಕೆ ಸಭಾ ನಿರ್ವಹಣೆಯಲ್ಲೂ ತನ್ನನ್ನು ಉತ್ತಮವಾಗಿ ತೊಡಗಿಸಿಕೊಂಡಿರುತ್ತಾಳೆ

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...