Tuesday, April 9, 2024

ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ : ವಿಶ್ವ ಹಿಂದೂ ಪರಿಷತ್ ಆಕ್ರೋಶ

ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದ್ರೆ ಇದೀಗ ಅದೇ ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 9 ಬೀಫ್ ಸ್ಟಾಲ್ ತೆರೆಯುವ ಯೋಜನೆ ಕೈಗೊಳ್ಳಲಾಗಿದೆ.

114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು, ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ಮ್ಯಾಪ್ ರೆಡಿ ಮಾಡಲಾಗಿದೆ. ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ 18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿದೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ. ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ.

ದ‌.ಕ ಜಿಲ್ಲೆಯಲ್ಲಿ 9 ಬೀಫ್ ಸ್ಟಾಲ್ ಗೆ ಅವಕಾಶ ಸರಿಯಲ್ಲ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಮಂಡಳಿ ತಕ್ಷಣ ಈ ಯೋಜನೆ ಕೈ ಬಿಡಬೇಕು. ಕೈ ಬಿಡದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿ.ಎಚ್.ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಎಚ್ಚರಿಕೆ ನೀಡಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...