Saturday, April 6, 2024

ಪೋಷಕರ ಸಭೆಯಲ್ಲಿ ವ್ಯಕ್ತಿಯಿಂದ ಶಿಕ್ಷಕಿ ಮೇಲೆ ಹಲ್ಲೆ : ಆರೋಪಿ ಆರೆಸ್ಟ್

ಮಂಗಳೂರು: ಕಾಟಿಪಳ್ಳ ಎರಡನೇ ಬ್ಲಾಕ್‌ನ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಪೋಷಕರ ಸಭೆಯ ವೇಳೆ ವ್ಯಕ್ತಿಯೋರ್ವ ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣ ಗುರು ಶಾಲೆಯ ಬಳಿಯ ನಿವಾಸಿ ಚಂದ್ರಕಲಾ ಎಂಬಾಕೆ ಮಹಮ್ಮದ್ ಹನೀಫ್ ನಿಂದ ಹಲ್ಲೆಗೊಳಗಾದ ಶಿಕ್ಷಕಿ ಎಂದು ತಿಳಿದು ಬಂದಿದೆ.

ಚಂದ್ರಕಲಾ ಅವರಿಗೆ ಆರೋಪಿ ಹನೀಫ್ ಪರಿಚಯವಿದ್ದು, ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಹಣದ ಅವಶ್ಯಕತೆ ಇದ್ದು, ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದೆ.

ಇನ್ನು ಮಾತಿನ ಭರದಲ್ಲಿ ಶಿಕ್ಷಕಿಯು ತನ್ನ ಮಗುವಿನ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಸಿಟ್ಟಾದ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದು, ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ.

ಇನ್ನು ಈ ಕುರಿತು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...