Wednesday, April 17, 2024

ವಿಮಾನದ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಪತ್ತೆ : ಆಹಾರ ಇಲಾಖೆ, ಪೊಲೀಸ್‌ ದಾಳಿ

ಮಂಗಳೂರು: ವಿಮಾನಗಳಲ್ಲಿ ಬಳಕೆ ಮಾಡಲಾಗುವ ದುಬಾರಿ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್‌ ಕದಿಯುತ್ತಿದ್ದ ಸುರತ್ಕಲ್‌ ಸಮೀಪದ ಬಾಳ ಪ್ರದೇಶಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಪೆಟ್ರೋಲ್‌ 2ಟ್ಯಾಂಕರ್‌, ಪಿಕಪ್‌ ಸಹಿತ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಸಂಜೆ ಖಚಿತ ಮಾಹಿತಿಯ ಮೇರೆಗೆ ಬಾಳ ಒಟ್ಟೆಕಾಯರ್‌ ತಿರುವು ಬಳಿ ದಾಳಿ ನಡೆಸಿದಾಗ ಗುಪ್ತವಾಗಿ ನಿರ್ಮಿಸಿದ ಅಂಡರ್‌ ಟ್ಯಾಂಕ್‌ ಒಂದು ಪತ್ತೆಯಾಗಿದೆ. ಎರಡು ಟ್ಯಾಂಕರ್‌ಗಳಿಂದ ಪೆಟ್ರೋಲ್‌ನ್ನು ಭೂಗತ ಟ್ಯಾಂಕ್‌ಗೆ ತುಂಬಿಸಿ ಬಳಿಕ ಟ್ಯಾಂಕರ್‌ಗೆ ಸೀಮೆಎಣ್ಣೆಯನ್ನು ರಾಸಾಯನಿಕ ಬಳಸಿ ಮಿಶ್ರಣ ಮಾಡಲಾಗುತ್ತಿತ್ತು. ಆದ್ರೆ ಈ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ  ಆಹಾರ ಇಲಾಖೆಯ ಮಾಣಿಕ್ಯ, ಚೇತನ್‌, ಉಪತಹಶೀಲ್ದಾರ್‌ ನವೀನ್‌, ಸುರತ್ಕಲ್‌ ಎಸ್‌ಐ ಪುನೀತ್‌ ಗಾಂವ್‌ಕರ್‌ ಮತ್ತಿತರರು ಪಾಲ್ಗೊಂಡಿದ್ದರು. ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 40 ಲಕ್ಷ ರೂ. ಮೌಲ್ಯದ 2 ಟ್ಯಾಂಕರ್‌, 12 ಲಕ್ಷ ರೂ.ಮೌಲ್ಯದ ಪಿಕಪ್‌, ಲಕ್ಷಾಂತರ ರೂ. ಮೌಲ್ಯದ 16 ಸಾವಿರ ಲೀಟರ್‌ ಎಟಿಎಫ್‌ ಪೆಟ್ರೋಲ್‌ ಹಾಗೂ ಡ್ರಮ್‌ಗಳು, ಒಂದು ಜನರೇಟರ್‌ ಅನ್ನು ವಶಕ್ಕೆ ಪಡೆಯಲಾಗಿದೆ.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...