Friday, April 5, 2024

ಅಕ್ರಮ ಮರಳು ದಂಧೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾ ಧ್ವಂಸಕ್ಕೆ ಮತ್ತೆ ಯತ್ನ : ಪ್ರಕರಣ ದಾಖಲು

ಮಂಗಳೂರು: ಮುಡಾ ಲೇಔಟ್ ಸೋಮೇಶ್ವರ ಕಡಲತೀರದಲ್ಲಿ ಅಕ್ರಮ ಮರಳು ದಂಧೆ ತಡೆಯುವ ಸಲುವಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ಎರಡನೇ ಬಾರಿಗೆ ಧ್ವಂಸಗೊಳಿಸುವ ಯತ್ನ ನಡೆದಿದ್ದು, ಈ ಕುರಿತು ಗ್ರಾಮ ಲೆಕ್ಕಾಧಿಕಾರಿ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಒಂದು ತಿಂಗಳ ಹಿಂದೆ ಸೋಮೇಶ್ವರ ಬೀಚ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ನವೆಂಬರ್ 6 ರಂದು ಮುಂಜಾನೆ 2.25 ರ ಸುಮಾರಿಗೆ ಕಾರಿನಿಂದ ಇಳಿದ ವ್ಯಕ್ತಿಯೊಬ್ಬ ಸಿಸಿಟಿವಿ ಕ್ಯಾಮೆರಾವನ್ನು ಹಾನಿ ಮಾಡಲು ಯತ್ನಿಸಿದ್ದಾರೆ.

ಇನ್ನು ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ತಡೆಯುವ ನಿಟ್ಟಿನಲ್ಲಿ ಕುಂದಾಪುರದ ಸಿಸಿಟಿವಿ ರೆಕಾರ್ಡಿಂಗ್ 24×7 ಅಳವಡಿಕೆಗೆ ಜಿಲ್ಲಾಧಿಕಾರಿ ಹಾಗೂ ಮರಳು ಸಮಿತಿ ಅಧ್ಯಕ್ಷರು ಸೆಕ್ಯುರಿಟಿ ಸಹಿ ಮಾಡಲು ಗುತ್ತಿಗೆ ನೀಡಿದ್ದಾರೆ. ಆದರೂ ಮರಳು ಮಾಫಿಯಾ ತಲೆ ಕೆಡಿಸಿಕೊಳ್ಳದೆ ವಿಧ್ವಂಸಕ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದಾರೆ ಎನ್ನಲಾಗಿದೆ.

ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...