Monday, April 15, 2024

ಸುಧಾರಣ ಕಾಮಗಾರಿ ಹಿನ್ನೆಲೆ : ನ.8ರಿಂದ ಡಿ.12ರವರೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಮುಂಬಯಿ ಲೋಕಮಾನ್ಯ ತಿಲಕ್‌ ಟರ್ಮಿನಸ್‌ನಲ್ಲಿ ಪಿಟ್‌ಲೈನ್ ನಂ.6ರಲ್ಲಿನ ಸುಧಾರಣ ಕಾಮಗಾರಿ ಹಿನ್ನೆಲೆಯಲ್ಲಿ ನ.8 ರಿಂದ ಡಿ.12ರವರೆಗೆ ಕೆಲವೊಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ನಂ.16346 ತಿರುವನಂತಪುರ ಲೋಕಮಾನ್ಯ ತಿಲಕ್‌ ನೇತ್ರಾವತಿ ಎಕ್ಸ್‌ ಪ್ರಸ್‌ ರೈಲು ನ.9ರಿಂದ ಡಿ.11ರ ವರೆಗೆ ಪನ್ವೆಲ್‌ ವರೆಗೆ ಮಾತ್ರ ಸಂಚರಿಸಲಿದೆ. ನಂ.12620 ಮಂಗಳೂರು ಸೆಂಟ್ರಲ್‌ ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು ನ. 9ರಿಂದ ಡಿ. 11ರ ವರೆಗೆ ಪನ್ವೆಲ್‌ ಜಂಕ್ಷನ್‌ ವರೆಗೆ ಸಂಚರಿಸಲಿದೆ. ನಂ.12619 ಮುಂಬಯಿ ಲೋಕಮಾನ್ಯ ತಿಲಕ್‌ ಮಂಗಳೂರು ಸೆಂಟ್ರಲ್‌ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ನ. 9ರಿಂದ ಡಿ. 12ರ ವರೆಗೆ ಲೋಕಮಾನ್ಯ ತಿಲಕ್‌ ಬದಲಿಗೆ ಪನ್ವೆಲ್‌ ನಿಲ್ದಾಣದಿಂದ ಹೊರಡಲಿದೆ.

ನಂ.16345 ಲೋಕಮಾನ್ಯ ತಿಲಕ್‌ ತಿರುವನಂತಪುರ ಸೆಂಟ್ರಲ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲು ನ.10ರಿಂದ ಡಿಸೆಂಬರ್‌ 13ರ ವರೆಗೆ ಲೋಕಮಾನ್ಯ ತಿಲಕ್‌ ಬದಲಿಗೆ ಪನ್ವೆಲ್‌ನಿಂದ ಹೊರಡಲಿರುವುದಾಗಿ ದಕ್ಷಿಣ ರೈಲ್ವೇ ಪ್ರಕಟನೆ ತಿಳಿಸಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...