Saturday, April 13, 2024

ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣ ; ಇಬ್ಬರು ಆರೋಪಿಗಳು ಆರೆಸ್ಟ್

ಉಳ್ಳಾಲ: ಸೋಮೇಶ್ವರದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತುಂಬಿನಾಡ್ ಮೂಲದ ದಿಶಾಂತ್ ಮತ್ತು ರಕ್ಷಿತ್ ಎಂದು ಗುರುತಿಸಲಾಗಿದೆ.

ಅಕ್ರಮ ಮರಳು ಸಾಗಾಟ ತಡೆಯುವುದಕ್ಕಾಗಿ ದ.ಕ. ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿ ಕ್ಯಾಮರಾ ಅಳವಡಿಸಿತ್ತು. ಆದ್ರೆ ಬಂಧಿತರು ಕಳೆದ ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲಿ ಮರಳು ಸಾಗಾಟ ಮಾಡುವ ಉದ್ದೇಶದಿಂದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಲಾರಿಯಿಂದ ಢಿಕ್ಕಿ ಹೊಡೆದು ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...