Sunday, April 7, 2024

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ  ಇಂದು ಬೆಳಗ್ಗೆ ನಡೆದಿದೆ.

ಸಿದ್ದಕಟ್ಟೆ ಕರ್ಪೆ ನಿವಾಸಿ ಜಯ ನಾಯ್ಕ್ ಅಡಿಕೆ ಮರದಿಂದ ಬಿದ್ದು ಮೃತಪಟ್ಟ ವ್ಯಕ್ತಿ.

ಕಣಿಯೂರು ಸಿದ್ದಕಟ್ಟೆ ಎಂಬಲ್ಲಿ ವ್ಯಕ್ತಿಯೋರ್ವ ಅಡಿಕೆ ತೋಟದಲ್ಲಿ ಮರಕ್ಕೆ  ಹತ್ತಿ  ಅಡಿಕೆಯನ್ನು  ಕೀಳುವ  ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ವಾಗಿ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ಕೂಡಲೇ ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆಯಾದರೂ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...