Saturday, April 6, 2024

ಆಚರಣೆಗಿಂತ ಪರಿಪಾಲನೆ ಮುಖ್ಯ – ಉದಯಕುಮಾರ್ ಬಿ.

ಇಂದು ನಾವು ಆಚರಿಸುತ್ತಿರುವ ಮಹಾತ್ಮ ಗಾಂಧೀಜಿಯವರ ಜನ್ಮದಿನೋತ್ಸವ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯ ಈ ಒಂದು ಕಾರ್ಯಕ್ರಮವು ಅರ್ಥಪೂರ್ಣವಾಗಬೇಕಾದರೆ , ಆಚರಣೆ ಮಾಡುವುದಕ್ಕಿಂತ ನಮ್ಮ ಬದುಕಿನಲ್ಲಿ ಪರಿಪಾಲನೆ ಮಾಡಿದಾಗ ಮಾತ್ರ ಇದಕ್ಕೆ ನೈಜ ಅರ್ಥ ಬರುತ್ತದೆ. ಈ ಕಾರ್ಯವನ್ನು ಪ್ರತಿಯೊಬ್ಬರೂ ಕೂಡ ಅಳವಡಿಸಿಕೊಳ್ಳಬೇಕು” ಎಂದು ಉದಯಕುಮಾರ್ ಬಿ ಹೇಳಿದರು ‌.

ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಉಪ ಪ್ರಾಂಶುಪಾಲರಾಗಿದ್ದು ದಿನದ ಮಹತ್ವದ ಬಗ್ಗೆ ಮಾತನಾಡುತ್ತಾ ಈ ಮೇಲಿನ ಮಾತುಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಎನ್. ಸಿ. ಸಿ ಅಧಿಕಾರಿ ನಿರಂಜನ್ ಜೈನ್ ಐ, ಸಂಸ್ಥೆಯ ಶಿಕ್ಷಕ ಬಂಧುಗಳಾದ ಗೋಪಾಲ್ , ಶಾಂತ ಎಸ್, ಪದ್ಮಜಾ ಎಂ, ಸತ್ಯಕಿರಣ್ ಕುಮಾರ್, ರಾಧಿಕಾ ನಾಯಕ್, ಹರಿಪ್ರಸಾದ್ ಆರ್, ಹಿಲೇರಿ ಡಿಸೋಜಾ, , ಮೇಘ, ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್ ದೋಟ, ರಶ್ಮಿ ಮತ್ತು ಧರಣೇಂದ್ರ ಕೆ ಸಹಕಾರದೊಂದಿಗೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...