Sunday, April 7, 2024

ದ. ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಪರಿಷ್ಕರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ನವಂಬರ್ 15 ರಿಂದ ಅನ್ವಯವಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ.

1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 17 ರೂ. ನಿಗದಿಪಡಿಸಿದೆ, ಕಾಯುವಿಕೆ ಮೊದಲ 15 ನಿಮಿಷ ಉಚಿತವಾಗಿದ್ದು. ನಂತರ 15 ನಿಮಿಷದವರೆಗೆ 5 ರೂ. ಇರಲಿದೆ.

ಪ್ರಯಾಣಿಕರ ಲಗೇಜ್‌ ಜೊತೆ ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜತೆಗಿರಬೇಕು. ಮೊದಲ 20 ಕಿ.ಗ್ರಾಂ.ಗಳಿಗೆ ಉಚಿತ ಮತ್ತು ಬಳಿಕ ಪ್ರತೀ 20 ಕಿಲೋ ವರೆಗೆ 5 ರೂ. ಹೆಚ್ಚುವರಿ ನೀಡಬೇಕಾಗಿದ್ದು, ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಮಾತ್ರ ಈ ದರದ ಒಂದೂವರೆ ಪಟ್ಟು ಪಡೆಯಲು ಅವಕಾಶ ಇದೆ.

ಆಟೋಗಳಿಗೆ ಕಲರ್‌ ಕೋಡಿಂಗ್‌ ಅಳವಡಿಸಲು ನಿರ್ಧರಿಸಲಾಗಿದ್ದು, ವಲಯ-1 (ಮಂಗಳೂರು ನಗರ)ರಲ್ಲಿ ಎಲ್ಲ ವಿಧದ ರಿಕ್ಷಾಗಳು, ಇ-ಆಟೋ ರಿಕ್ಷಾಗಳು ಒಳಗೊಂಡಂತೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯಲು ಈಗಾಗಲೇ ನಿಗದಿಪಡಿಸಿದೆ, ಜತೆಗೆ ಪೊಲೀಸ್‌ ಇಲಾಖೆಯಿಂದ ನೋಂದಾಯಿಸಿ ನೀಡಲ್ಪಟ್ಟ ಸ್ಟಿಕ್ಕರ್‌ ಅನ್ನು ನಾಲ್ಕೂ ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು.

ವಲಯ-2 (ಮಂಗಳೂರು ಗ್ರಾಮಾಂತರ) ವಾಹನಗಳಿಗೆ ಕಪ್ಪು ಮತ್ತು ಹಳದಿ ಬಣ್ಣಗಳಿದ್ದು, ಪೊಲೀಸ್‌ ಇಲಾಖೆಯಿಂದ ನೀಡಲ್ಪಟ್ಟ ವಲಯ-2 ಎಂಬ ಸ್ಟಿಕ್ಕರನ್ನು ನಾಲ್ಕೂ ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖ ಮಾಡಲಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...