Tuesday, April 9, 2024

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು. ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು.

More from the blog

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....