Saturday, April 6, 2024

ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ

ಬಂಟ್ವಾಳ : ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬ ಲ್ಲಿ ರಾತ್ರಿ ವೇಳೆ ನಡೆದಿದೆ.
ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ಘಟನೆ ನಡೆದಿದೆ.
ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಅಂಬ್ಯುಲೆನ್ಸ್ ವಾಹನದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಸಾಗಿಸಿದ್ಧಾರೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...