Friday, April 5, 2024

ನ.6 ರಂದು ಸಜೀಪ ವಲಯದ ಬಂಟ ಕ್ರೀಡೋತ್ಸವ

ಬಂಟರ ಸಂಘ ಸಜೀಪ ಮೂಡ ಸಜೀಪ ವಲಯ ಇದರ “ಬಂಟ ಕ್ರೀಡೋತ್ಸವ ” ವಲಯ ಮಟ್ಟದ ಕ್ರೀಡಾಕೂಟ ಹಾಗೂ ತಾಲೂಕು ಮಟ್ಟದ ಗುಂಪು ಕ್ರೀಡೆಗಳು ನ.06 ರಂದು ಅದಿತ್ಯವಾರ ಬೆಳಿಗ್ಗೆ 9ರಿಂದ ದಿ.ಸುಧಾ.ಬಿ.ಶೆಟ್ಟಿ ವೇದಿಕೆ ಸಜೀಪ ಸಂಕೇಶ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಂಜೆ 5.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಜೀಪ ವಲಯ ಬಂಟರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಮಾಜಿ ರಾಜ್ಯಸಭಾ ಸದಸ್ಯೆ ಹಾಗೂ ಪ್ರಸಿದ್ಧ ಪಂಚಭಾಷಾ ನಟಿ ಜಯಪ್ರದಾ ಭಾಗಿಯಾಗಲಿದ್ದಾರೆ. ಹಾಗೂ ಬಂಟವಾಳ ತಾಲೂಕು ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಸಜೀಪ ವಲಯ ಬಂಟರ ಸಂಘ ಗೌರವಾಧ್ಯಕ್ಷ ರಾಧಾಕೃಷ್ಣ ಆಳ್ವ ಭಾಗವಹಿಸಲಿದ್ದಾರೆ.

ಬಂಟವಾಳ ತಾಲೂಕು ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷ ಹಾಗೂ ಸಜೀಪ ವಲಯ ಬಂಟರ ಸಂಘದ ಗೌರವಾಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಪ್ರಕಟ ನೆಯ ಲ್ಲಿ ತಿಳಿಸಿದ್ದಾರೆ

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...